ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ದೊಡ್ಡ ಕಾನೂನು ಹೊಡೆತ ಬಿದ್ದಿದೆ. 2016ರಲ್ಲಿ ನಡೆದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಅವರನ್ನು ದೋಷಿ ಎಂದು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಆರೋಪಿಗಳ ವಿರುದ್ಧ ಅಂತಿಮ ತೀರ್ಪು ಪ್ರಕಟವಾಗಿದೆ. ಸುಮಾರು 10 ವರ್ಷಗಳ ಕಾಲ ನಡೆದ ಸುಧೀರ್ಘ ವಿಚಾರಣೆಯ ಬಳಿಕ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ.
2016ರ ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾಗಿದ್ದ ಯೋಗೀಶ್ ಗೌಡರನ್ನು ಹತ್ಯೆ ಮಾಡಲಾಗಿತ್ತು. ಈ ಘಟನೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಮೂಡಿಸಿತ್ತು.
ಈಗ ನ್ಯಾಯಾಲಯ ದೋಷಾರೋಪಣೆಯನ್ನು ದೃಢಪಡಿಸಿದ್ದು, ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಲಾಗುವುದು. ಈ ತೀರ್ಪು ರಾಜ್ಯ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.








