ಶಿವಮೊಗ್ಗ : ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿ ಅವರನ್ನು ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಭಾರೀ ಟೀಕೆಗಳಿಗೆ ಒಳಗಾಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಅವರ ವಿರುದ್ಧ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸ್ವಾತಂತ್ರ‍್ಯ ಹೋರಾಟಗಾರ ವೀರ ಸಾವರ್ಕರ್ ಅವರಷ್ಟು ದೊರೆಸ್ವಾಮಿಯವರು ದೊಡ್ಡ ಹೋರಾಟಗಾರರೇ? ಕಾಂಗ್ರೆಸ್ ಮುಖವಾಣಿಯಂತೆ ಅವರು ವರ್ತಿಸುತ್ತಿದ್ದಾರೆ ಎಂದು ಮತ್ತೆ ಗುಡುಗಿದ್ದಾರೆ.
ಇನ್ನು ಸ್ವಾತಂತ್ರ‍್ಯ ಹೋರಾಟಗಾರ ವೀರ ಸಾವರ್ಕರ್ ಬಗ್ಗೆ ಕಾಂಗ್ರೆಸ್ ನವರು ಬಹಳಷ್ಟು ಕೀಳಾಗಿ ಮಾತನಾಡಿದ್ದಾರೆ. ಅವರಿಗೆ ಮಾನ ಮರ್ಯಾದೆ ಇದ್ದರೆ ಮೊದಲು ಕ್ಷಮಾಪಣೆ ಕೇಳಲಿ, ಆ ನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ. ವೀರ ಸಾವರ್ಕರ್ ಅವರು ದೇಶಕಂಡ ಅಪರೂಪದ ಸ್ವಾತಂತ್ರ‍್ಯ ಹೋರಾಟಗಾರರು, ನಾನು ಯಾರ ಬಳಿಯೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಯತ್ನಾಳ್ ಸ್ಪಷ್ಟಪಡಿಸಿದ್ದಾರೆ.
ಗೃಹಲಕ್ಷ್ಮೀಯರ ಮನೆಬಾಗಿಲಿಗೆ ಬರಲಿದೆ ಮರುಪರಿಶೀಲನೆಯ ಬಿಸಿ ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆಯಲ್ಲಿ ಸಣ್ಣ ತಪ್ಪಾದರೂ ಎರಡು ಸಾವಿರಕ್ಕೆ ಬೀಳಲಿದೆ ಕತ್ತರಿ
ಬೆಂಗಳೂರು: ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಆಸರೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಈಗ ಹೊಸ ಕಟ್ಟುನಿಟ್ಟಿನ ನಿಯಮಗಳ ಕಾಲ ಎದುರಾಗಿದೆ. ಚುನಾವಣಾ ಅಖಾಡದಲ್ಲಿ ಹವಾ ಸೃಷ್ಟಿಸಿದ್ದ ಈ ಗ್ಯಾರಂಟಿ...








