AAP ಪಕ್ಷದ ರಾಜ್ಯಸಭಾ ಸದಸ್ಯರ ಪೈಕಿ 10ರಲ್ಲಿ 7 ಮಂದಿ ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿ ಪಂಜಾಬ್ ಜನರಿಗೆ ದ್ರೋಹ ಮಾಡುತ್ತಿದೆ ಎಂದು ಆರೋಪಿಸಿದರು. ಪಕ್ಷಕ್ಕೆ ಸ್ವಂತ ರಾಜಕೀಯ ಬಲ ಇಲ್ಲ, ಬದಲಾಗಿ ಕುಶಲ ರಾಜಕೀಯ ತಂತ್ರಗಳನ್ನು ಬಳಸಿ ಇತರ ಪಕ್ಷದ ನಾಯಕರನ್ನು ಸೆಳೆಯುತ್ತಿದೆ ಎಂದು ಟೀಕಿಸಿದರು.
ಪಂಜಾಬ್‌ನಲ್ಲಿ ಶಾಸಕರನ್ನು ಸೆಳೆಯಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ. ಇಡಿ (ED) ಭಯವನ್ನು ಬಳಸಿಕೊಂಡು ನಮ್ಮ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಅವರಿಗೆ ನಿಜವಾಗಿಯೂ ಧೈರ್ಯವಿದ್ದರೆ, ನನ್ನ ಮನೆ ಮೇಲೆಯೇ ED ದಾಳಿ ಮಾಡಲಿ, ಎಂದು ಭಗವಂತ್ ಮಾನ್ ಸವಾಲು ಹಾಕಿದ್ದಾರೆ.
ಈ ಹೇಳಿಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.








