ರಾಜ್ಯದ ಉಪಚುನಾವಣೆ ಹಾಗೂ ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಜನರ ವಿಶ್ವಾಸ ಗೆದ್ದು, ಚುನಾವಣೆಯಲ್ಲಿ ಕಾಂಗ್ರೆಸ್ಗೆ ಉತ್ತಮ ಫಲಿತಾಂಶ ತಂದುಕೊಟ್ಟಿವೆ ಎಂದು ಅವರು ಹೇಳಿದ್ದಾರೆ.
ಜನರ ಕಷ್ಟಗಳಿಗೆ ನಮ್ಮ ಕಾಂಗ್ರೆಸ್ ಪಕ್ಷದ ಸರ್ಕಾರ ಸ್ಪಂದಿಸಿದೆ. ಗ್ಯಾರಂಟಿ ಯೋಜನೆಗಳು ನೇರವಾಗಿ ಜನರಿಗೆ ಲಾಭ ನೀಡಿವೆ. ಅದರಿಂದಲೇ ಉಪಚುನಾವಣೆಗಳಲ್ಲಿ ಉತ್ತಮ ಪ್ರತಿಫಲ ಸಿಕ್ಕಿದೆ, ಎಂದು ಡಿಕೆಶಿ ಹೇಳಿದ್ದಾರೆ.
ಇನ್ನೂ ಇತರ ರಾಜ್ಯಗಳ ಫಲಿತಾಂಶಗಳ ಬಗ್ಗೆ ಮಾತನಾಡಿದ ಅವರು, ಕೇರಳದಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸವಿತ್ತು. ಆದರೆ ತಮಿಳು ನಾಡಿನಲ್ಲಿ ಬಂದಿರುವ ಫಲಿತಾಂಶ ಅಚ್ಚರಿಯಾಗಿದೆ. ಅಲ್ಲಿ ಹೊಸ ರಾಜಕೀಯ ಯುಗ ಆರಂಭವಾಗಿದೆ ಎಂದು ಕಾಣುತ್ತಿದೆ, ಎಂದು ಅಭಿಪ್ರಾಯಪಟ್ಟರು.
ಈ ಹೇಳಿಕೆ ದೇಶದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಗ್ಯಾರಂಟಿ ಯೋಜನೆಗಳ ಪರಿಣಾಮ ಮತ್ತು ಭವಿಷ್ಯದ ಚುನಾವಣಾ ತಂತ್ರಗಳ ಬಗ್ಗೆ ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.







