ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಆಸ್ಪತ್ರೆಗೆ ದಾಖಲು
ಮುಂಬೈ, ಜುಲೈ 17: ಲಘು ಜ್ವರದಿಂದ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೊರೋನ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಪತಿ ಅಭಿಷೇಕ್ ಬಚ್ಚನ್ ಮತ್ತು ಮಾವ ಅಮಿತಾಬ್ ಬಚ್ಚನ್ ಅವರನ್ನು ಈಗಾಗಲೇ ಅದೇ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಇದಕ್ಕೂ ಮೊದಲು ಜುಲೈ 11 ರಂದು 77 ವರ್ಷದ ಅಮಿತಾಬ್ ಬಚ್ಚನ್ ಅವರಿಗೆ ಕೊರೋನವೈರಸ್ ಸೋಂಕು ದೃಢಪಟ್ಟಿತ್ತು. ಬಳಿಕ ಕುಟುಂಬ ಸದಸ್ಯರನ್ನು ಪರೀಕ್ಷೆಗೆ ಒಳಪಡಿಸಿದಾಗ ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಮತ್ತು ಆರಾಧ್ಯ ರೈ ಬಚ್ಚನ್ ಗೆ ಕೂಡ ಕೊರೊನಾ ಸೋಂಕು ದೃಢಪಟ್ಟಿತ್ತು. ಐಶ್ವರ್ಯಾ ರೈ ಬಚ್ಚನ್ ಮತ್ತು ಆರಾಧ್ಯ ರಿಗೆ ಯಾವುದೇ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಳ್ಳದ ಹಿನ್ನಲೆಯಲ್ಲಿ ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದರು.
ಮೂಲಗಳ ಪ್ರಕಾರ, ಐಶ್ವರ್ಯ ರೈಗೆ ಇಂದು ಲಘ ಜ್ವರ ಕಾಣಿಸಿಕೊಂಡಿದ್ದು, ನಂತರ ಅವರು ಮತ್ತು ಮಗಳು ಆರಾಧ್ಯ ಅವರನ್ನು ಕೋವಿಡ್ -19 ಚಿಕಿತ್ಸೆಗಾಗಿ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.








