ಪ್ರಹ್ಲಾದ ಜೋಶಿ ಅವರು ದೇಶದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.
ಜಾಗತಿಕ ಮಟ್ಟದಲ್ಲಿ ಯುದ್ಧ, ಆರ್ಥಿಕ ಬಿಕ್ಕಟ್ಟು ಹಾಗೂ ಇಂಧನ ಮಾರುಕಟ್ಟೆಯ ಅಸ್ಥಿರತೆಯ ನಡುವೆಯೂ ಭಾರತದಲ್ಲಿ ತೈಲ ಬೆಲೆ ಏರಿಕೆ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ ಎಂದು ಅವರು ಹೇಳಿದ್ದಾರೆ. ಇತರ ಹಲವು ದೇಶಗಳಲ್ಲಿ ಇಂಧನ ದರಗಳು 20ರಿಂದ 45 ಶೇಕಡಾ ವರೆಗೆ ಏರಿಕೆಯಾಗಿದ್ದರೆ, ಭಾರತದಲ್ಲಿ ಕೇವಲ 3.2 ಶೇಕಡಾ ಮಾತ್ರ ಹೆಚ್ಚಳ ಮಾಡಲಾಗಿದೆ ಎಂದು ಅಂಕಿಅಂಶಗಳೊಂದಿಗೆ ಸ್ಪಷ್ಟಪಡಿಸಿದರು.
ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಲೀಟರ್ಗೆ 3 ರೂಪಾಯಿ ಹೆಚ್ಚಳ ಮಾಡಿದ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ತೀವ್ರ ಟೀಕೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಜೋಶಿ, ಜಾಗತಿಕ ಪರಿಸ್ಥಿತಿಗೆ ಹೋಲಿಸಿದರೆ ಭಾರತದಲ್ಲಿ ಜನರ ಮೇಲಿನ ಭಾರವನ್ನು ಕಡಿಮೆ ಮಾಡುವ ಪ್ರಯತ್ನ ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದ್ದಾರೆ.
ಇಂಧನ ದರ ಏರಿಕೆ ಕುರಿತ ರಾಜಕೀಯ ಚರ್ಚೆ ತೀವ್ರವಾಗಿರುವ ನಡುವೆ, ಕೇಂದ್ರ ಸರ್ಕಾರದ ಈ ಸಮರ್ಥನೆ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ.








