ಅನೂಪ್ ಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ.
ರಾಜ್ಯಾದ್ಯಂತ ಈಗಾಗಲೇ ಶೇ.86 ರಷ್ಟು ಮ್ಯಾಪಿಂಗ್ ಕೆಲಸ ಪೂರ್ಣಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಕಾರ್ಯ ವೇಗವಾಗಿ ಸಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಶೇ.96 ರಷ್ಟು ಮ್ಯಾಪಿಂಗ್ ಕಾರ್ಯ ಮುಗಿದಿದ್ದು, ಚಿತ್ತಾಪುರ ಕ್ಷೇತ್ರದಲ್ಲಿ ಶೇ.99 ರಷ್ಟು ಕೆಲಸ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.
SIR ಫಾರಂನಲ್ಲಿ ಗಣತಿ ನಮೂನೆಯೇ ಪ್ರಮುಖವಾಗಿದ್ದು, ಮತದಾರರ ವಿವರಗಳನ್ನು ನಿಖರವಾಗಿ ಸಂಗ್ರಹಿಸಲು ಬೂತ್ ಮಟ್ಟದ ಅಧಿಕಾರಿಗಳು (BLOs) ಪ್ರತಿ ಮನೆಗೂ ಎರಡು ಸೆಟ್ಗಳ ಗಣತಿ ನಮೂನೆಗಳನ್ನು ತಲುಪಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಮತದಾರರ ಪಟ್ಟಿಯನ್ನು ನವೀಕರಿಸುವ ಮತ್ತು ದೋಷರಹಿತಗೊಳಿಸುವ ಉದ್ದೇಶದಿಂದ ಈ ವಿಶೇಷ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ನಾಗರಿಕರು ಸಹಕರಿಸುವಂತೆ ಚುನಾವಣಾಧಿಕಾರಿಗಳು ಮನವಿ ಮಾಡಿದ್ದಾರೆ.







