ಎಚ್. ಡಿ. ದೇವೇಗೌಡ ಅವರು ತಮ್ಮ 93ನೇ ಹುಟ್ಟುಹಬ್ಬದ ದಿನ ರಾಜ್ಯದ ಜನರಿಗಾಗಿ ಹೋರಾಟ ಮುಂದುವರಿಸುವ ಸಂಕಲ್ಪ ವ್ಯಕ್ತಪಡಿಸಿದ್ದಾರೆ.
ಹುಟ್ಟುಹಬ್ಬದ ಅಂಗವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ 93 ವರ್ಷ ಆಯಿತು ಎಂದು ಮನೆಯಲ್ಲೇ ಕುಳಿತುಕೊಳ್ಳುವುದಿಲ್ಲ. ನನ್ನ ಕೈಲಾದ ಮಟ್ಟಿಗೆ ಜನರಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಇದೇ ವೇಳೆ, NDA ಮೈತ್ರಿ ಕುರಿತೂ ಪ್ರತಿಕ್ರಿಯಿಸಿದ ದೇವೇಗೌಡರು, ನರೇಂದ್ರ ಮೋದಿ ಅವರು ತುಂಬಾ ಒಳ್ಳೆಯ ಸಂದೇಶ ಕಳುಹಿಸಿದ್ದಾರೆ ಎಂದು ತಿಳಿಸಿದರು. NDA ಮತ್ತು JDS ನಡುವಿನ ಸಂಬಂಧದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಯಾವುದೇ ಸಮಸ್ಯೆಗಳು ಬಂದರೂ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.
ದೇವೇಗೌಡರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಅವರ ರಾಜಕೀಯ ಚಟುವಟಿಕೆಗಳ ಬಗ್ಗೆ ಮತ್ತೆ ಗಮನ ಸೆಳೆಯುತ್ತಿದೆ.








