ಡಿಕೆ ಶಿವಕುಮಾರ್ ಅವರು ತುಮಕೂರನ್ನು 2ನೇ ಬೆಂಗಳೂರು ಆಗಿ ಅಭಿವೃದ್ಧಿಪಡಿಸುವ ಆಲೋಚನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಮೇಲಿನ ಜನಸಂಖ್ಯೆ ಮತ್ತು ಮೂಲಸೌಕರ್ಯ ಒತ್ತಡ ಕಡಿಮೆ ಮಾಡಲು ಪರ್ಯಾಯ ನಗರಗಳ ಅಭಿವೃದ್ಧಿ ಅಗತ್ಯವಾಗಿದೆ ಎಂದು ಹೇಳಿದರು.
ತುಮಕೂರು 2ನೇ ಬೆಂಗಳೂರು ಆಗಬೇಕು ಎನ್ನುವ ಕೂಗಿಗೆ ನನ್ನ ಸಂಪೂರ್ಣ ಬೆಂಬಲವಿದೆ. ಬೆಂಗಳೂರಿನ ಜನಸಂಖ್ಯೆ ನಿಯಂತ್ರಣ ಮಾಡಲು ಉತ್ತಮ ಮಾರ್ಗವೆಂದರೆ ತುಮಕೂರನ್ನು ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಪಡಿಸುವುದು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ತುಮಕೂರಿನ ಕೈಗಾರಿಕಾ, ಶೈಕ್ಷಣಿಕ ಹಾಗೂ ಸಂಪರ್ಕ ವ್ಯವಸ್ಥೆಯ ಸಾಮರ್ಥ್ಯವನ್ನು ಉಲ್ಲೇಖಿಸಿದ ಅವರು, ಭವಿಷ್ಯದಲ್ಲಿ ಈ ನಗರವನ್ನು ಪ್ರಮುಖ ಆರ್ಥಿಕ ಹಾಗೂ ವಾಣಿಜ್ಯ ಕೇಂದ್ರವನ್ನಾಗಿ ರೂಪಿಸುವ ದಿಸೆಯಲ್ಲಿ ಸರ್ಕಾರ ಕೆಲಸ ಮಾಡಲಿದೆ ಎಂದರು.
ಡಿಕೆಶಿ ಅವರ ಈ ಹೇಳಿಕೆ ಇದೀಗ ರಾಜ್ಯ ರಾಜಕೀಯ ಹಾಗೂ ಅಭಿವೃದ್ಧಿ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, 2ನೇ ಬೆಂಗಳೂರು ಕನಸು ಮತ್ತೆ ಮುನ್ನೆಲೆಗೆ ಬಂದಿದೆ.







