ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಬೆಂಗಳೂರು, ಜುಲೈ 18: 2020-21ನೇ ಸಾಲಿನಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಹಾಗೂ ಆಫ್ ಲೈನ್‍ನಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಬ್ಯಾಂಕ್‍ಗಳ ಸಹಭಾಗಿತ್ವದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸಣ್ಣ ಸಾಲ, ಸ್ವಸಹಾಯ ಗುಂಪುಗಳಿಗೆ ಸಹಾಯಧನ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ತರಬೇತಿಗೆ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

ವಿವಿಧ ಯೋಜನೆಗಳಡಿಯಲ‌್ಲಿ ಸೌಲಭ್ಯ ಪಡೆಯಲು ಬಯಸುವವರು ಪ್ರವರ್ಗ-1ರ 6ಎ ಯಿಂದ 6ಎಕೆ.ವರೆಗಿನ ಕೋಲಿ, ಗಂಗಾಮತ, ಬೆಸ್ತ, ಕಬ್ಬಲಿಗ, ಮೊಗವೀರ, ಅಂಬಿಗ ಅಥವಾ ಅಂಬಿ, ಬಾರ್ಕಿ ಅಥವಾ ಬಾರಿಕ, ಬೆಸ್ತರ್, ಭೋಯಿ, ರಾಜಬೋಯಿ, ಬುಂಡೆ ಬೆಸ್ತರ್, ದಾಲ್ಕಿ, ದಾವತ್, ಗಬಿಟ್, ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ, ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆ-ಬೆಸ್ತ ಅಥವಾ ಗುಂಡೆಬೆಸ್ತ, ಹರಕಂತ್ರ, ಜಲಗಾರ, ಕಬ್ಬೇರ ಅಥವಾ ಕಬ್ಬೇರ್, ಕಬ್ಬಿಲಿ, ಕಹರ್, ಖಾರ್ವಿ ಅಥವಾ ಕೊಂಕಣಖಾರ್ವಿ, ಕೋಳಿಮಹದೇವ್, ಮಡ್ಡರ್, ಮೀನಗಾರ್, ಮಗೇರ್, ಮುಕ್ಕವಾನ್, ಪರಿವಾರ, ಸಿವಿಯರ್, ಸುಣಗಾರ, ತೊರೆಯ, ವಾಗಿ ಜಾತಿಗೆ ಸೇರಿದವರಾಗಿರಬೇಕು.
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವೆಬ್ ವಿಳಾಸ
http://ambigaradevelopment.karnataka.gov.in ಗೆ ಭೇಟಿ ನೀಡಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಅಗಸ್ಟ್ 12 ಕೊನೆಯ ದಿನವಾಗಿದ್ದು, ಜೊತೆಗೆ ಅರ್ಜಿಯಲ್ಲಿ ನಮೂದಿಸಿರುವ ದಾಖಲಾತಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ವಿವರ ಹಾಗೂ ಮಾಹಿತಿಯನ್ನು ನಿಗಮದ ವೆಬ್‌ಸೈಟ್ ನಿಂದ ಪಡೆಯಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








