ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ, ಇನ್ನೂ ಹಲವಾರು ಶಾಸಕರು ಕೂಡ ಅದೇ ದಾರಿಯಲ್ಲಿ ಸಾಗಲು ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ರಾಜೀನಾಮೆ ನೀಡಿದ ಮೂವರು ಶಾಸಕರು ತಕ್ಷಣವೇ ಅಧವ್ ಅರ್ಜುನ್ ಅವರನ್ನು ಭೇಟಿಯಾಗಿ ಟಿವಿಕೆ ಪಕ್ಷಕ್ಕೆ ಸೇರ್ಪಡೆಯಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇದೇ ವೇಳೆ, ಇತ್ತೀಚೆಗೆ ನಟ ವಿಜಯ್ ಅವರಿಗೆ ಬೆಂಬಲ ಸೂಚಿಸಿ ವಿಧಾನಸಭೆಯಲ್ಲಿ ಮತ ಚಲಾಯಿಸಿದ್ದ ಇನ್ನೂ ಹಲವು ಎಐಎಡಿಎಂಕೆ ಶಾಸಕರು ಕೂಡ ಟಿವಿಕೆ ಸೇರ್ಪಡೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಈ ಬೆಳವಣಿಗೆಗಳಿಂದ ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಾಚಾರಗಳು ಸಂಪೂರ್ಣ ಬದಲಾಗುವ ಸಾಧ್ಯತೆ ಕಾಣಿಸುತ್ತಿದ್ದು, ಎಐಎಡಿಎಂಕೆ ಪಕ್ಷದೊಳಗಿನ ಅಸಮಾಧಾನ ಬಹಿರಂಗವಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಸಕರ ರಾಜೀನಾಮೆ ಹಾಗೂ ಪಕ್ಷಾಂತರ ರಾಜಕೀಯ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.








