ಕರ್ನಾಟಕ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಇದೀಗ ತಾರಕಕ್ಕೇರಿದೆ. ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ರಾಜ್ಯದ CM ಕುರ್ಚಿಗಾಗಿ ‘ಫೈನಲ್ ಫೈಟ್’ ಆರಂಭವಾಗಿದ್ದು, ಮಹತ್ವದ ಸಭೆಗಳ ಸರಣಿ ನಡೆಯುತ್ತಿದೆ.
ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ DK ಶಿವಕುಮಾರ್ ಜೊತೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಪ್ರತ್ಯೇಕವಾಗಿ ಸಭೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ, ಸಚಿವ ಸಂಪುಟ ಪುನರ್‌ರಚನೆ ಹಾಗೂ ಹೊಸ ರಾಜಕೀಯ ಸಮೀಕರಣಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ನಡುವೆ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಹಾಗೂ AICC ಪ್ರಧಾನ ಕಾರ್ಯದರ್ಶಿ KC ವೇಣುಗೋಪಾಲ್ ಅವರು CM ಸಿದ್ದರಾಮಯ್ಯರ ಜೊತೆ ಎರಡನೇ ಹಂತದ ಮಹತ್ವದ ಸಭೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ರಾಜಕೀಯದ ಭವಿಷ್ಯ ನಿರ್ಧರಿಸುವ ಈ ಸಭೆಗಳತ್ತ ಇದೀಗ ಇಡೀ ರಾಜ್ಯದ ಚಿತ್ತ ನೆಟ್ಟಿದೆ.







