ADVERTISEMENT
Wednesday, May 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮಹತ್ವದ ಸೂಚನೆ: ಈ ಕೆಲಸ ಮಾಡದಿದ್ದರೆ ನಿಲ್ಲಲಿದೆ ಪ್ರತಿ ತಿಂಗಳ 2,000 ರೂಪಾಯಿ ಹಣ

Shwetha by Shwetha
May 27, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಬದಲಾವಣೆಯಾಗುತ್ತಿದ್ದು, ಇನ್ಮುಂದೆ ಹಣ ಪಡೆಯಲು ಬಯೋಮೆಟ್ರಿಕ್ ಕಡ್ಡಾಯವಾಗಲಿದೆ. ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಲಾಭ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಈ ಕಠಿಣ ಕ್ರಮಕ್ಕೆ ಮುಂದಾಗಿದೆ. ಒಂದು ವೇಳೆ ನಿಗದಿತ ಸಮಯದೊಳಗೆ ನೋಂದಣಿ ನವೀಕರಿಸದಿದ್ದರೆ ಮುಂದಿನ ತಿಂಗಳಿನಿಂದ ನಿಮ್ಮ ಖಾತೆಗೆ ಹಣ ಜಮೆಯಾಗುವುದಿಲ್ಲ.

ಅನರ್ಹರಿಗೆ ಬ್ರೇಕ್ ಹಾಕಲು ಸರ್ಕಾರದ ಮಾಸ್ಟರ್ ಪ್ಲಾನ್

Related posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ CM ಫೈನಲ್ ಫೈಟ್..!

May 27, 2026
ತಮಿಳುನಾಡಿನ ಸಿಎಂ ಪಟ್ಟಕ್ಕೇರಿದ ದಳಪತಿ ವಿಜಯ್: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಮೂರು ಬಿಗ್ ಗ್ಯಾರಂಟಿ ಘೋಷಣೆ

ಮೇಕೆದಾಟು ಯೋಜನೆಗೆ ಮತ್ತೆ ತಮಿಳುನಾಡು ವಿರೋಧ..!

May 27, 2026

ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗವಾಗುತ್ತಿರುವುದನ್ನು ತಡೆಯಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈಗ ಒನ್ ಟೈಮ್ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ. ಸುಮಾರು ಎರಡು ಲಕ್ಷ ಮಂದಿ ಮೃತಪಟ್ಟಿದ್ದರೂ ಅವರ ಖಾತೆಗೆ ಇಂದಿಗೂ ಹಣ ಹೋಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದರ ಜೊತೆಗೆ 50 ಸಾವಿರಕ್ಕೂ ಅಧಿಕ ಆದಾಯ ತೆರಿಗೆ ಪಾವತಿದಾರರು ಕೂಡ ಈ ಯೋಜನೆಯ ಲಾಭ ಪಡೆಯುತ್ತಿರುವುದು ಪತ್ತೆಯಾಗಿದೆ. ಈ ಲೂಟಿ ತಡೆಯಲು ಬಯೋಮೆಟ್ರಿಕ್ ಕಡ್ಡಾಯಗೊಳಿಸಲಾಗಿದೆ.

ಫಲಾನುಭವಿಗಳು ಏನು ಮಾಡಬೇಕು

ಯೋಜನೆಯ ಲಾಭ ಪಡೆಯುತ್ತಿರುವ ಪ್ರತಿಯೊಬ್ಬ ಮಹಿಳೆಯು ತಮ್ಮ ಹತ್ತಿರದ ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಬೇಕು. ಅಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ತಮ್ಮ ಮೊಬೈಲ್ ಸಂಖ್ಯೆಯನ್ನು ನೀಡಿ, ಬೆರಳಚ್ಚು ನೀಡುವ ಮೂಲಕ ಒಮ್ಮೆಯ ಬಯೋಮೆಟ್ರಿಕ್ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಈ ಸರಳ ಪ್ರಕ್ರಿಯೆಯು ನೈಜ ಫಲಾನುಭವಿಗಳನ್ನು ಗುರುತಿಸಲು ನೆರವಾಗಲಿದೆ.

ಬಯೋಮೆಟ್ರಿಕ್ ಮಾಡದಿದ್ದರೆ ಏನಾಗುತ್ತೆ

ಯಾರು ನಿಗದಿತ ಅವಧಿಯೊಳಗೆ ತಮ್ಮ ಬಯೋಮೆಟ್ರಿಕ್ ನೀಡುವುದಿಲ್ಲವೋ, ಅಂತಹವರ ಖಾತೆಗೆ ಹಣ ಬಿಡುಗಡೆಯನ್ನು ತಕ್ಷಣವೇ ಸ್ಥಗಿತಗೊಳಿಸಲಾಗುತ್ತದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿರುವ ಮಾಹಿತಿಯಂತೆ, ಯಾರು ಅರ್ಹರಿದ್ದಾರೋ ಅವರು ಆತಂಕ ಪಡುವ ಅಗತ್ಯವಿಲ್ಲ. ಕೇವಲ ಒಂದು ಬಾರಿ ಬಯೋಮೆಟ್ರಿಕ್ ನೀಡಿದರೆ ಸಾಕು, ಯೋಜನೆ ಮುಂದುವರಿಯುತ್ತದೆ. ಆದರೆ ನವೀಕರಣ ಮಾಡದ ಖಾತೆಗಳು ಸ್ವಯಂಚಾಲಿತವಾಗಿ ರದ್ದಾಗಲಿವೆ.

ಆದಾಯ ತೆರಿಗೆ ಪಾವತಿದಾರರಿಗೆ ಶಾಕ್

ಆಹಾರ ಇಲಾಖೆಯ ಪರಿಶೀಲನೆಯಲ್ಲಿ ಈಗಾಗಲೇ ಲಕ್ಷಾಂತರ ಬಿಪಿಎಲ್ ಕಾರ್ಡ್‌ಗಳು ಎಪಿಎಲ್‌ ಆಗಿ ಪರಿವರ್ತನೆಗೊಂಡಿವೆ. ಈ ಪೈಕಿ ಆದಾಯ ತೆರಿಗೆ ಪಾವತಿಸುವವರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿದ್ದರೆ ಅಂತಹವರ ಸದಸ್ಯತ್ವವನ್ನು ತಕ್ಷಣವೇ ರದ್ದುಗೊಳಿಸಲಾಗುವುದು. ಅರ್ಹ ಬಡ ಮಹಿಳೆಯರಿಗೆ ಮಾತ್ರ ಸರ್ಕಾರದ ಈ ಹಣ ಸಿಗಬೇಕು ಎನ್ನುವುದು ಸರ್ಕಾರದ .

ಹೀಗಾಗಿ ಗೃಹಲಕ್ಷ್ಮಿ ಹಣ ಪಡೆಯುತ್ತಿರುವ ಮಹಿಳೆಯರು ಕೂಡಲೇ ಇಲಾಖೆ ಹೊರಡಿಸುವ ಮಾರ್ಗಸೂಚಿಗಳನ್ನು ಗಮನಿಸಿ, ಅಗತ್ಯ ನವೀಕರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವುದು ಉತ್ತಮ. ಇದರಿಂದ ಬ್ಯಾಂಕ್ ಖಾತೆಗೆ ಯಾವುದೇ ತಡೆಯಿಲ್ಲದೆ ಹಣ ಜಮೆಯಾಗಲಿದೆ.

ShareTweetSendShare
Join us on:

Related Posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ CM ಫೈನಲ್ ಫೈಟ್..!

by Shwetha
May 27, 2026
0

ಕರ್ನಾಟಕ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಇದೀಗ ತಾರಕಕ್ಕೇರಿದೆ. ಕಾಂಗ್ರೆಸ್‌ ಹೈಕಮಾಂಡ್ ಅಂಗಳದಲ್ಲಿ ರಾಜ್ಯದ CM ಕುರ್ಚಿಗಾಗಿ ‘ಫೈನಲ್ ಫೈಟ್’ ಆರಂಭವಾಗಿದ್ದು, ಮಹತ್ವದ...

ತಮಿಳುನಾಡಿನ ಸಿಎಂ ಪಟ್ಟಕ್ಕೇರಿದ ದಳಪತಿ ವಿಜಯ್: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಮೂರು ಬಿಗ್ ಗ್ಯಾರಂಟಿ ಘೋಷಣೆ

ಮೇಕೆದಾಟು ಯೋಜನೆಗೆ ಮತ್ತೆ ತಮಿಳುನಾಡು ವಿರೋಧ..!

by Shwetha
May 27, 2026
0

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ಯೋಜನೆ ಮತ್ತೆ ರಾಜಕೀಯ ಕಾವು ಪಡೆದುಕೊಂಡಿದೆ. ಕಾವೇರಿ ನದಿಗೆ ಅಡ್ಡಲಾಗಿ ಯೋಜನೆಗೆ ಭೂಮಿ ಪೂಜೆ ಘೋಷಣೆ ಮಾಡಿರುವ ಬೆನ್ನಲ್ಲೇ ತಮಿಳುನಾಡು...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದ್ವೇಷ ಭಾಷಣ ತಡೆ ಮಸೂದೆಗೆ ಕೇಂದ್ರ ಬ್ರೇಕ್..! ರಾಜ್ಯ ಸರ್ಕಾರಕ್ಕೆ ಹಿನ್ನಡೆ

by Shwetha
May 27, 2026
0

ರಾಜ್ಯ ಸರ್ಕಾರಕ್ಕೆ ಮಹತ್ವದ ಹಿನ್ನಡೆಯಾಗಿದ್ದು, ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ತಡೆಗೆ ಸಂಬಂಧಿಸಿದ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ತಾತ್ಕಾಲಿಕ ಬ್ರೇಕ್ ಹಾಕಿದೆ. ರಾಜ್ಯ ಸರ್ಕಾರ...

ದೆಹಲಿಯತ್ತ ಎಲ್ಲರ ಚಿತ್ತ, ರಾಜಣ್ಣ ಮಾತ್ರ ಅಮೆರಿಕಕ್ಕೆ ಪಯಣ: ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದ ಮಾಜಿ ಸಚಿವರು!

ದೆಹಲಿಯತ್ತ ಎಲ್ಲರ ಚಿತ್ತ, ರಾಜಣ್ಣ ಮಾತ್ರ ಅಮೆರಿಕಕ್ಕೆ ಪಯಣ: ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದ ಮಾಜಿ ಸಚಿವರು!

by Shwetha
May 27, 2026
0

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಂಪುಟ ಪುನರ್‌ರಚನೆಯ ಚರ್ಚೆಗಳು ಕಾಡ್ಗಿಚ್ಚಿನಂತೆ ಹಬ್ಬುತ್ತಿರುವ ಬೆನ್ನಲ್ಲೇ, ಸಚಿವ ಕೆಎನ್ ರಾಜಣ್ಣ ಅವರು ನೀಡಿರುವ ಹೇಳಿಕೆ ಈಗ ಹೊಸ ಸಂಚಲನ...

ದೆಹಲಿ ಹೈಕಮಾಂಡ್ ಮುಂದೆ ಮಂಡಿಯೂರಿ ಕುಳಿತ ರಾಜ್ಯ ಸರ್ಕಾರ: ಕರ್ನಾಟಕದ ಜನತೆ ಅನಾಥ ಎಂದ ಬಿಜೆಪಿ

ದೆಹಲಿ ಹೈಕಮಾಂಡ್ ಮುಂದೆ ಮಂಡಿಯೂರಿ ಕುಳಿತ ರಾಜ್ಯ ಸರ್ಕಾರ: ಕರ್ನಾಟಕದ ಜನತೆ ಅನಾಥ ಎಂದ ಬಿಜೆಪಿ

by Shwetha
May 27, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹೈಕಮಾಂಡ್ ಭೇಟಿ ಮತ್ತು ಕುರ್ಚಿ ಕಾಳಗದ ವಿಚಾರವೀಗ ಹದ್ದು ಮೀರಿದ ವಾಕ್ಸಮರಕ್ಕೆ ಕಾರಣವಾಗಿದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ದೆಹಲಿ ಹೈಕಮಾಂಡ್ ಮುಂದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram