ADVERTISEMENT
Friday, May 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಸಿದ್ದರಾಮಯ್ಯ ನಂತರ ಸಿಎಂ ಯಾರು? ಗೊತ್ತಿಲ್ಲ! ರಾಜ್ಯ ಸರ್ಕಾರದ ವಿರುದ್ಧ ಬಿ ವೈ ವಿಜಯೇಂದ್ರ ವಾಗ್ದಾಳಿ

Shwetha by Shwetha
May 29, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಹೊಸಪೇಟೆ: ಕರ್ನಾಟಕ ರಾಜಕೀಯದಲ್ಲಿ ಈಗ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ, ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ಆ ಖಾಲಿಯಾಗುವ ಕುರ್ಚಿಗೆ ವಾರಸುದಾರರು ಯಾರು ಎಂಬ ಯಕ್ಷಪ್ರಶ್ನೆ ಇಡೀ ರಾಜ್ಯವನ್ನು ಕಾಡುತ್ತಿದೆ ಎಂದು ಅವರು ಲೇವಡಿ ಮಾಡಿದ್ದಾರೆ.

ವಿಜಯೇಂದ್ರ ಅವರು ಹೊಸಪೇಟೆಯಲ್ಲಿ ಬಿಜೆಪಿ ಜಿಲ್ಲಾ ಘಟಕ ಆಯೋಜಿಸಿದ್ದ ದೀನ್ ದಯಾಲ್ ಉಪಾಧ್ಯಾಯ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದರು. ಸಿದ್ದರಾಮಯ್ಯ ಅವರು ಅಧಿಕಾರದಿಂದ ಕೆಳಗಿಳಿದ ತಕ್ಷಣ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ತಾಕತ್ತು ಅಥವಾ ಸ್ಪಷ್ಟತೆ ಕಾಂಗ್ರೆಸ್ ಪಕ್ಷಕ್ಕಿಲ್ಲ. ಅಲ್ಲಿನ ಆಂತರಿಕ ಕಚ್ಚಾಟ ಮತ್ತು ಬಣ ರಾಜಕೀಯದ ಗೊಂದಲಗಳು ಅಷ್ಟು ಸುಲಭವಾಗಿ ಇತ್ಯರ್ಥವಾಗುವ ಲಕ್ಷಣಗಳಿಲ್ಲ. ಈ ಅಧಿಕಾರದಾಹದ ಸಂಘರ್ಷ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ವಿಜಯೇಂದ್ರ ಭವಿಷ್ಯ ನುಡಿದರು.

Related posts

ಸಿದ್ದರಾಮಯ್ಯ ಬದಲಾವಣೆ ನಡೆಯುತ್ತಿರುವ ಬೆನ್ನಲ್ಲೇ ಯುಟಿ ಖಾದರ್ ಹೆಸರು ಮುಂಚೂಣಿಗೆ! ಉಪಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್?

ಸಿದ್ದರಾಮಯ್ಯ ಬದಲಾವಣೆ ನಡೆಯುತ್ತಿರುವ ಬೆನ್ನಲ್ಲೇ ಯುಟಿ ಖಾದರ್ ಹೆಸರು ಮುಂಚೂಣಿಗೆ! ಉಪಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್?

May 29, 2026
ಕನಕಪುರದ ಬಂಡೆಗೆ ಅಜ್ಜಯ್ಯನ ಬ್ರೇಕ್ ಮುಖ್ಯಮಂತ್ರಿಯಾಗುವವರೆಗೂ ಮೌನವೇ ಮದ್ದು

ಕನಕಪುರದ ಬಂಡೆಗೆ ಅಜ್ಜಯ್ಯನ ಬ್ರೇಕ್ ಮುಖ್ಯಮಂತ್ರಿಯಾಗುವವರೆಗೂ ಮೌನವೇ ಮದ್ದು

May 29, 2026

ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ನ ಆಂತರಿಕ ಕಿತ್ತಾಟದಿಂದಾಗಿ ರಾಜ್ಯದ ಆಡಳಿತ ಮತ್ತು ಆರ್ಥಿಕ ವ್ಯವಸ್ಥೆ ಸಂಪೂರ್ಣವಾಗಿ ಹಳಿ ತಪ್ಪಿದೆ ಎಂದು ಕಿಡಿಕಾರಿದರು. ಕಳೆದ ಮೂರು ವರ್ಷಗಳಿಂದ ಉಂಟಾಗಿರುವ ಆರ್ಥಿಕ ಕುಸಿತವನ್ನು ಸರಿಪಡಿಸುವುದು ಈಗ ಯಾರಿಂದಲೂ ಸಾಧ್ಯವಿಲ್ಲದ ಮಾತಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ರೈತರು ಮತ್ತು ಬಡವರ ಕಲ್ಯಾಣ ಹೇಗೆ ಸಾಧ್ಯ? ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ಕುಂಠಿತವಾಗಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ರೈತರ ಸಂಕಷ್ಟದ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅನ್ನದಾತರ ಗೋಳನ್ನು ಕೇಳುವವರೇ ಇಲ್ಲದಂತಾಗಿದೆ. ಹಲವು ಜಿಲ್ಲೆಗಳಲ್ಲಿ ಕೃತಕವಾಗಿ ರಸಗೊಬ್ಬರ ಅಭಾವ ಸೃಷ್ಟಿಸುವ ಪಿತೂರಿ ನಡೆಯುತ್ತಿದೆ. ಈ ಮೂಲಕ ರೈತರ ಬದುಕಿನ ಜೊತೆ ಸರ್ಕಾರ ಆಟವಾಡುತ್ತಿದೆ. ಒಟ್ಟಾರೆಯಾಗಿ ಕಾಂಗ್ರೆಸ್ ಸರ್ಕಾರವು ರಾಜ್ಯದ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಜನರ ವಿಶ್ವಾಸವನ್ನು ಕಳೆದುಕೊಂಡಿರುವ ಈ ಸರ್ಕಾರದಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಹರಿಹಾಯ್ದರು.

ಇದೇ ವೇಳೆ ರಾಜ್ಯಪಾಲರ ಭೇಟಿ ಮತ್ತು ಸರ್ಕಾರದ ನಡೆಯ ಬಗ್ಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರ ಭೇಟಿಗೆ ಸಮಯ ಕೇಳುವ ಕನಿಷ್ಠ ಜವಾಬ್ದಾರಿ ಇರಬೇಕಿತ್ತು. ಆದರೆ ಸಂಪುಟ ಸಭೆಯ ಟಿಪ್ಪಣಿಯಲ್ಲಿ ಅದರ ಉಲ್ಲೇಖವಿಲ್ಲದಿರುವುದು ಆಶ್ಚರ್ಯಕರ. ಕಾಂಗ್ರೆಸ್ ಗೆ 138 ಶಾಸಕರ ಬಲವಾದ ಬೆಂಬಲ ಇರುವಾಗ ಬಿಜೆಪಿ ಹಸ್ತಕ್ಷೇಪ ಮಾಡುತ್ತಿದೆ ಎನ್ನುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ರಾಜ್ಯದ ಜನರು ಅವರಿಗೆ ಆಡಳಿತ ನಡೆಸಲು ಆಶೀರ್ವಾದ ಮಾಡಿದ್ದಾರೆ, ಅವರು ಕೆಲಸ ಮಾಡಲಿ. ನಾವು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಜನರ ಧ್ವನಿಯಾಗಿ ಕೆಲಸ ಮಾಡುತ್ತೇವೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

ShareTweetSendShare
Join us on:

Related Posts

ಸಿದ್ದರಾಮಯ್ಯ ಬದಲಾವಣೆ ನಡೆಯುತ್ತಿರುವ ಬೆನ್ನಲ್ಲೇ ಯುಟಿ ಖಾದರ್ ಹೆಸರು ಮುಂಚೂಣಿಗೆ! ಉಪಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್?

ಸಿದ್ದರಾಮಯ್ಯ ಬದಲಾವಣೆ ನಡೆಯುತ್ತಿರುವ ಬೆನ್ನಲ್ಲೇ ಯುಟಿ ಖಾದರ್ ಹೆಸರು ಮುಂಚೂಣಿಗೆ! ಉಪಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್?

by Shwetha
May 29, 2026
0

ಕರ್ನಾಟಕ ರಾಜಕೀಯದ ಗಲ್ಲಿಗಳಲ್ಲಿ ಈಗ ಕೇವಲ ಒಂದೇ ಚರ್ಚೆ ಸದ್ದು ಮಾಡುತ್ತಿದೆ. ಅದೇನೆಂದರೆ ಮುಂದಿನ ಮುಖ್ಯಮಂತ್ರಿ ಯಾರು ಮತ್ತು ಹೊಸ ಸಂಪುಟದ ಸ್ವರೂಪ ಹೇಗಿರಲಿದೆ ಎಂಬುದು. ಸಿದ್ದರಾಮಯ್ಯ...

ಕನಕಪುರದ ಬಂಡೆಗೆ ಅಜ್ಜಯ್ಯನ ಬ್ರೇಕ್ ಮುಖ್ಯಮಂತ್ರಿಯಾಗುವವರೆಗೂ ಮೌನವೇ ಮದ್ದು

ಕನಕಪುರದ ಬಂಡೆಗೆ ಅಜ್ಜಯ್ಯನ ಬ್ರೇಕ್ ಮುಖ್ಯಮಂತ್ರಿಯಾಗುವವರೆಗೂ ಮೌನವೇ ಮದ್ದು

by Shwetha
May 29, 2026
0

ಕರ್ನಾಟಕ ರಾಜಕಾರಣದಲ್ಲಿ ಈಗ ಎಲ್ಲರ ಕಣ್ಣು ಕನಕಪುರದ ಬಂಡೆ ಡಿಕೆ ಶಿವಕುಮಾರ್ ಮೇಲೆ ನೆಟ್ಟಿದೆ. ಸಿದ್ದರಾಮಯ್ಯ ಅವರ ನಂತರ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ತೆರೆ...

ಬಿಜೆಪಿ ಕಾರ್ಯಕರ್ತರು ನಮ್ಮ ಯೋಜನೆಯ ಲಾಭ ಪಡೆಯುತ್ತಿಲ್ಲವೇ?

ಪದತ್ಯಾಗಕ್ಕೂ ಮುನ್ನ CM ಮಾಸ್ಟರ್ ಪ್ಲ್ಯಾನ್:ಆಪ್ತ ಅಧಿಕಾರಿಗಳಿಗೆ ಆಯಕಟ್ಟಿನ ಜಾಗ ಫಿಕ್ಸ್ ಮಾಡಿ ಸುರಕ್ಷಿತ ನೆಲೆ ಕಲ್ಪಿಸಿದ ಸಿದ್ದರಾಮಯ್ಯ

by Shwetha
May 29, 2026
0

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯ ಪರ್ವ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿ, ರಾಜ್ಯಪಾಲರಿಗೆ ಅಧಿಕೃತವಾಗಿ ಪತ್ರ ರವಾನಿಸಿದ್ದಾರೆ. ರಾಜ್ಯಪಾಲರು ಸದ್ಯ...

ಸಿಎಂ ಸಿದ್ದರಾಮಯ್ಯ ಕೈ ಸೇರಿದ ಜಾತಿ ಗಣತಿ ವರದಿ : ಲಿಂಗಾಯತ, ಒಕ್ಕಲಿಗರನ್ನು ಹಿಂದಿಕ್ಕಿ ಮುಸ್ಲಿಮರೇ ನಂಬರ್ ಒನ್!

ಸಿಎಂ ಸಿದ್ದರಾಮಯ್ಯ ಕೈ ಸೇರಿದ ಜಾತಿ ಗಣತಿ ವರದಿ : ಲಿಂಗಾಯತ, ಒಕ್ಕಲಿಗರನ್ನು ಹಿಂದಿಕ್ಕಿ ಮುಸ್ಲಿಮರೇ ನಂಬರ್ ಒನ್!

by Shwetha
May 29, 2026
0

ದಶಕಗಳ ಕಾಲ ಚರ್ಚೆಗೆ ಗ್ರಾಸವಾಗಿದ್ದ ಮತ್ತು ರಾಜ್ಯ ರಾಜಕಾರಣದ ದಿಕ್ಸೂಚಿಯನ್ನೇ ಬದಲಿಸಬಲ್ಲ ಸಾಮರ್ಥ್ಯವಿರುವ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಅಂತಿಮ ವರದಿ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಸಿದ್ದರಾಮನಹುಂಡಿಯಿಂದ ವಿಧಾನಸೌಧದವರೆಗೆ: ರಾಜಕಾರಣದ ದಿಕ್ಕು ಬದಲಿಸಿದ ಜನನಾಯಕನ  ಯುಗಾಂತ್ಯ

ಸಿದ್ದರಾಮನಹುಂಡಿಯಿಂದ ವಿಧಾನಸೌಧದವರೆಗೆ: ರಾಜಕಾರಣದ ದಿಕ್ಕು ಬದಲಿಸಿದ ಜನನಾಯಕನ ಯುಗಾಂತ್ಯ

by Shwetha
May 29, 2026
0

ಮೈಸೂರು ಜಿಲ್ಲೆಯ ಒಂದು ಪುಟ್ಟ ಹಳ್ಳಿ ಸಿದ್ದರಾಮನಹುಂಡಿ. ಅಲ್ಲಿನ ಮಣ್ಣಿನ ಮಗನೊಬ್ಬ ಇಡೀ ಕರ್ನಾಟಕದ ರಾಜಕೀಯ ದಿಕ್ಕನ್ನೇ ಬದಲಿಸುತ್ತಾನೆ ಎಂದು ಯಾರೂ ಊಹಿಸಿರಲಿಲ್ಲ. ವಕೀಲ ವೃತ್ತಿಯಿಂದ ಆರಂಭವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram