ಬೆಂಗಳೂರು: ಮಹಾಮಾರಿ ಕೊರೊನಾ ಕರ್ನಾಟಕ ಸೇರಿದಂತೆ ರಾಜಧಾನಿ ಬೆಂಗಳೂರಿನಲ್ಲಿ ತನ್ನ ಅಟ್ಟಹಾಸ ಮುಂದುವರೆಸಿದೆ. ಹೆಮ್ಮಾರಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಸ್ಯಾಂಡಲ್ವುಡ್ನ ಹಿರಿಯ ನಟ ಹುಲಿವಾನ ಗಂಗಾಧರಯ್ಯ(70) ಬಲಿಯಾಗಿದ್ದಾರೆ.
ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಗಂಗಾಧರಯ್ಯ ಅವರು ಬೆಂಗಳೂರು ಹೊರವಲಯದ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಮೃತಪಟ್ಟಿದ್ದಾರೆ.
ಹುಲಿವಾನ ಗಂಗಾಧರಯ್ಯ ಅವರಿಗೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರು.
ಶಿವಾಜಿನಗರ, ಕ್ವಾಟ್ಲೆ ಸತೀಶ್, ಉಲ್ಟಾಪಲ್ಟಾ, ಸ್ವಸ್ತಿಕ್ ಸೇರಿದಂತೆ ಹಲವು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಗಂಗಾಧರಯ್ಯ ನಟಿಸಿದ್ದರು. ಕಿರುತೆರೆಯಲ್ಲೂ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಗಂಗಾಧರಯ್ಯ ಅಭಿನಯಿಸಿದ್ದಾರೆ. ಪ್ರೇಮಲೋಕ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಅವರು, ಇತ್ತೀಚೆಗೆ ಶೂಟಿಂಗ್ನಲ್ಲಿ ಭಾಗಿಯಾಗಿದ್ದರು. ಅಷ್ಟೇ ಅಲ್ಲದೆ ರಂಗಭೂಮಿ ಕ್ಷೇತ್ರಗಳಲ್ಲೂ ಗಂಗಾಧರಯ್ಯ ಸೇವೆ ಸಲ್ಲಿಸಿದ್ದಾರೆ.
ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...








