ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಾಷ್ಟ್ರ ರಾಜಕಾರಣಕ್ಕೆ ಬರಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಮೇಲೆ ಒತ್ತಡ ಹೇರಿದ್ದರು ಎನ್ನಲಾಗಿದೆ. ರಾಜ್ಯಸಭೆ ಮೂಲಕ ದೆಹಲಿಯ ರಾಜಕೀಯಕ್ಕೆ ಪ್ರವೇಶಿಸುವ ಅವಕಾಶವನ್ನೂ ನೀಡಲು ಹೈಕಮಾಂಡ್ ಮುಂದಾಗಿತ್ತು ಎಂಬ ಮಾಹಿತಿ ಕೇಳಿಬಂದಿದೆ.
ಸಿದ್ದರಾಮಯ್ಯ ಅವರು ರಾಜ್ಯಸಭೆಗೆ ಬರಲು ಸಾಧ್ಯವಾಗದಿದ್ದರೆ, ಅವರ ಪತ್ನಿಗೆ ರಾಜ್ಯಸಭಾ ಸ್ಥಾನ ನೀಡುವ ಆಫರ್ ಕೂಡ ನೀಡಲಾಗಿತ್ತು ಎನ್ನಲಾಗಿದೆ. ಆದರೆ, ಇದಕ್ಕೆ ಸಿದ್ದರಾಮಯ್ಯ ಅವರು ನಯವಾಗಿ ನಿರಾಕರಣೆ ವ್ಯಕ್ತಪಡಿಸಿದ್ದಾರೆ.
ನಾನು ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ. ನನ್ನ ಪತ್ನಿ ಯಾವತ್ತೂ ರಾಜಕೀಯದಲ್ಲಿ ಇರಲಿಲ್ಲ. ಅವರು ಸಾರ್ವಜನಿಕ ಜೀವನಕ್ಕೂ ಬಂದಿಲ್ಲ. ಹೀಗಾಗಿ ರಾಜ್ಯಸಭೆಗೆ ಕಳುಹಿಸುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರಂತೆ.
ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಕರ್ನಾಟಕ ರಾಜಕಾರಣದಲ್ಲೇ ಸಕ್ರಿಯರಾಗಿರಲಿದ್ದಾರೆ ಎಂಬ ಸಂದೇಶ ನೀಡಿದಂತಾಗಿದೆ.








