ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೂರವಾಣಿ ಕರೆ ಮಾಡಿ ಶುಭ ಹಾರೈಸಿದ್ದಾರೆ.
ಸಿಎಂ ಡಿ. ಕೆ. ಶಿವಕುಮಾರ್ ಅವರಿಗೆ ಕರೆ ಮಾಡಿದ ಸೋನಿಯಾ ಗಾಂಧಿ, ಎಲ್ಲರನ್ನೂ ಜೊತೆಗೆ ಕರೆದೊಯ್ಯಿರಿ. ಕರ್ನಾಟಕವನ್ನು ಯಶಸ್ವಿಯಾಗಿ ಮುನ್ನಡೆಸುವಿರಿ ಎಂಬ ಅಚಲ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಂತೆ ಸಲಹೆ ನೀಡಿದ ಅವರು, ರಾಜ್ಯದ ಅಭಿವೃದ್ಧಿ ಹಾಗೂ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ನ ಈ ಬೆಂಬಲ ಡಿಕೆ ಶಿವಕುಮಾರ್ ಅವರ ನಾಯಕತ್ವಕ್ಕೆ ಮತ್ತಷ್ಟು ಬಲ ನೀಡಿದೆ ಎಂದು ರಾಜಕೀಯ ವಲಯದಲ್ಲಿ ಹೇಳಲಾಗುತ್ತಿದೆ.







