ಮೂಡುಬಿದಿರೆ: ಕ್ಷುಲ್ಲಕ ಕಾರಣಕ್ಕೆ ಸ್ವಂತ ಅಣ್ಣನೇ ತಮ್ಮನನ್ನು ಕೊಂದಿರುವ ಘಟನೆ ಕಾರ್ಕಳದ ಕೆಲ್ಲಪುತ್ರಿಗೆಯಲ್ಲಿ ನಡೆದಿದೆ. ರವೀಂದ್ರ ಮೃತ ದುರ್ದೈವಿಯಾಗಿದ್ದಾನೆ. ಭಾನುವಾರ ರಾತ್ರಿ ರವೀಂದ್ರ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಮೃತ ರವೀಂದ್ರ, ಮೃತನ ಅಣ್ಣ ಶ್ರೀನಿವಾಸ್, ಹಾಗೂ ಇವರಿಬ್ಬರ ಭಾವ ಆನಂದ ನಡುವೆ ಜಗಳವಾಗಿದೆ. ಈ ವೇಳೆ ಶ್ರೀನಿವಾಸ್ ಮತ್ತು ಆನಂದ ಇಬ್ಬರು ಸೇರಿ ರವೀಂದ್ರ ಅವರ ಹೊಟ್ಟೆ ಮೇಲೆ ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ. ಇದರಿಂದ ಸ್ಥಳದಲ್ಲೇ ರಕ್ತ ಕಕ್ಕಿ ಅಸ್ವಸ್ಥರಾಗಿದ್ದ ರವೀಂದ್ರ ಅವರನ್ನು ಸ್ಥಳೀಯರು ವೆನ್ಲಾಕ್ ಆಸ್ಪತ್ರೆಗೆ ಸೇರಿಸಿದ್ದಾರೆ. ಆದ್ರೆ ರವೀಂದ್ರ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸದ್ಯ ಈ ಸಂಬಂಧ ಪೊಲೀಸರು ಆರೋಪಿಗಳಾದ ಶ್ರೀನಿವಾಸ್ ಹಾಗೂ ಆನಂದ ಅವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ನವೆಂಬರ್ 30ರಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ!
ಮಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿರುವ ಕರಾವಳಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಯುವಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಕರ್ನಾಟಕ ಸರ್ಕಾರದ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ...








