ನಿರ್ದೇಶಕ ಹಾಗೂ ನಿರ್ಮಾಪಕ ಜೋಗಿ ಪ್ರೇಮ್ ಅವರ ತಾಯಿ ನಿಧನರಾಗಿದ್ದಾರೆ. ಲ್ಯುಕೇಮಿಯಾ ಕ್ಯಾನ್ಸರ್ ನಿಂದ ಬಳಲುತ್ತಿದ್ದ ೭೫ ವರ್ಷದ ಭಾಗ್ಯಮ್ಮ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಜಯನಗರದಲ್ಲಿನ ಶಾಂತಿ ಆಸ್ಪತ್ರೆಯಲ್ಲಿ ಬಾಗ್ಯಮ್ಮ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೂ ಭಾಗ್ಯಮ್ಮ ಅವರಿಗೆ ಕೊರೊನಾ ಟೆಸ್ಟ್ ಸಹ ಮಾಡಿಸಲಾಗಿದ್ದು, ರಿಪೋರ್ಟ್ ನೆಗೆಟಿವ್ ಬಂದಿದೆ. ಮಂಡ್ಯದ ಬೆಸಗರಹಳ್ಳಿಯಲ್ಲಿನ ಫಾರ್ಮ್ ಹೌಸ್‌ನಲ್ಲಿ ಭಾಗ್ಯಮ್ಮ ಅವರ ಅಂತ್ಯ ಕ್ರಿಯೆ ನೆರವೇರಲಿದೆ. ಬಾಗ್ಯಮ್ಮ ಅವರ ನಿಧನದದ ಸುದ್ದಿಯನ್ನು ಪ್ರೇಮ್ ರ ಪತ್ನಿ ನಟಿ ರಕ್ಷಿತಾ ಅವರು ಫೇಸ್ ಬುಕ್ ನಲ್ಲಿ ತಿಳಿಸಿದ್ದಾರೆ.
ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...








