ಮೈಸೂರು ಮತ್ತು ಪಂಡರಾಪುರ ನಡುವಿನ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ-ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸಲು ರೈಲ್ವೆ ಮಂಡಳಿ ಇಂದು ಒಪ್ಪಿಗೆ ನೀಡಿದೆ ಎಂದು ಸಚಿವ ಎಮ್. ಬಿ. ಪಾಟೀಲ್ ತಿಳಿಸಿದ್ದಾರೆ.
ಈ ನಿರ್ಧಾರದಿಂದ ವಿಜಯಪುರ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಜನರ ಬಹುಕಾಲದ ಬೇಡಿಕೆಗೆ ಮನ್ನಣೆ ಸಿಕ್ಕಂತಾಗಿದೆ. ಹೊಸ ಮಾರ್ಗದಿಂದ ಪ್ರಯಾಣಿಕರಿಗೆ ಉತ್ತಮ ಸಂಪರ್ಕ ಸೌಲಭ್ಯ ದೊರೆಯಲಿದ್ದು, ರೈಲು ಸೇವೆಯ ಉಪಯೋಗವೂ ಹೆಚ್ಚಾಗುವ ನಿರೀಕ್ಷೆಯಿದೆ.
ಈ ಮಹತ್ವದ ನಿರ್ಧಾರಕ್ಕಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಎಂ.ಬಿ. ಪಾಟೀಲ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉತ್ತರ ಕರ್ನಾಟಕದ ಜನರಿಗೆ ಅನುಕೂಲವಾಗುವ ಈ ಕ್ರಮವು ಪ್ರಾದೇಶಿಕ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಜೊತೆಗೆ, ಪ್ರಯಾಣಿಕರ ಸಂಚಾರ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಲಿದೆ ಎಂದು ಹೇಳಲಾಗುತ್ತಿದೆ.







