ವಿಧಾನ ಪರಿಷತ್ (MLC) ಚುನಾವಣೆಯ ಅಡ್ಡಮತದಾನ ವಿವಾದ ತೀವ್ರಗೊಂಡಿರುವ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.ಅವರು ಮಂಗಳೂರು ತಲುಪಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ಇಂದು ಬೆಳಗ್ಗೆ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಅಡ್ಡಮತದಾನ ಪ್ರಕರಣದ ಸತ್ಯಾಸತ್ಯತೆ ಪರಿಶೀಲನೆಗಾಗಿ ಧರ್ಮಸ್ಥಳದಲ್ಲಿ ಸಭೆ ನಡೆಸುವುದು ಹಾಗೂ ಆಣೆ-ಪ್ರಮಾಣ ಮಾಡುವ ಪ್ರಸ್ತಾವನೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆದರೆ ಈ ಪ್ರಸ್ತಾವನೆಗೆ ಪಕ್ಷದ ಹಿರಿಯ ನಾಯಕರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅದನ್ನು ಕೈಬಿಡಲಾಗಿದೆ.
ಈ ನಡುವೆ ವಿಜಯೇಂದ್ರ ಅವರ ಧರ್ಮಸ್ಥಳ ಭೇಟಿ ರಾಜಕೀಯವಾಗಿ ಮಹತ್ವ ಪಡೆದಿದ್ದು, ಇದು ಕೇವಲ ಧಾರ್ಮಿಕ ಭೇಟಿ ಅಥವಾ ಅಡ್ಡಮತದಾನ ವಿವಾದಕ್ಕೆ ಸಂಬಂಧಿಸಿದ ಬೆಳವಣಿಗೆಯೇ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ.
ಆದಾಗ್ಯೂ, ಅವರ ಭೇಟಿ ಕುರಿತು ಬಿಜೆಪಿ ಪಕ್ಷದಿಂದ ಯಾವುದೇ ವಿಶೇಷ ರಾಜಕೀಯ ಕಾರ್ಯಕ್ರಮದ ಅಧಿಕೃತ ಮಾಹಿತಿ ಹೊರಬಂದಿಲ್ಲ.








