ಕೊರೋನಾ ಮ’ರಣಕೇಕೆ’ : 24 ಗಂಟೇಲಿ 34,884 ಹೊಸ ಕೇಸ್, 671 ಮಂದಿ ಬಲಿ
ನವದೆಹಲಿ : ಭಾರತದಲ್ಲಿ ಹೆಮ್ಮಾರಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಾದ್ಯಂತ ದಾಖಲೆ ಪ್ರಮಾಣದಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 34,884 ಹೊಸ ಕೇಸ್ ಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ10,38,716ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 671 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಕೊರೊನಾಗೆ ಮೃತಪಟ್ಟವರ ಸಂಖ್ಯೆ 26,273ಕ್ಕೆ ಬಂದು ನಿಂತಿದೆ.
10,38,716 ಮಂದಿ ಸೋಂಕಿತರ ಪೈಕಿ ಇದುವರೆಗೂ 6,53,751 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ ದೇಶದಲ್ಲಿನ್ನೂ 3,58,692 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.








