ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ ನೈಸ್ ರಸ್ತೆಗಳನ್ನು ಬಳಸುವ ವಾಹನಗಳಿಗೆ ಜುಲೈ ಒಂದರಿಂದ ಪರಿಷ್ಕೃತ ಟೋಲ್ ದರಗಳು ಜಾರಿಗೆ ಬಂದಿವೆ.
ನಂದಿ ಎಕನಾಮಿಕ್ ಕಾರಿಡಾರ್ ಎಂಟಪ್ರೈಸಸ್ ಲಿಮಿಟೆಡ್, ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಯ ಅಡಿಯಲ್ಲಿ ವಿವಿಧ ಹಂತಗಳ ಟೋಲ್ ಶುಲ್ಕವನ್ನು ಪರಿಷ್ಕರಿಸಲಾಗಿದೆ.
ನೈಸ್ ರಸ್ತೆಯ ಕಾರುಗಳ ಹೊಸ ಟೋಲ್ ದರಗಳು:
ಹೊಸೂರು ರಸ್ತೆ – ಬನ್ನೇರುಘಟ್ಟ ರಸ್ತೆ: ₹72
ಬನ್ನೇರುಘಟ್ಟ ರಸ್ತೆ – ಕನಕಪುರ ರಸ್ತೆ: ₹53
ಕನಕಪುರ ರಸ್ತೆ – ಕ್ಲೋವರ್‌ಲೀಫ್ ಜಂಕ್ಷನ್: ₹39
ಕ್ಲೋವರ್‌ಲೀಫ್ ಜಂಕ್ಷನ್ – ಮೈಸೂರು ರಸ್ತೆ: ₹36
ಮೈಸೂರು ರಸ್ತೆ – ಮಾಗಡಿ ರಸ್ತೆ: ₹77
ಮಾಗಡಿ ರಸ್ತೆ – ತುಮಕೂರು ರಸ್ತೆ: ₹61
ಲಿಂಕ್ ರಸ್ತೆ: ₹83
ಈ ದರ ಪರಿಷ್ಕರಣೆಯಿಂದ ಪ್ರತಿದಿನ ಈ ರಸ್ತೆಗಳನ್ನು ಬಳಸುವ ಖಾಸಗಿ ಹಾಗೂ ವಾಣಿಜ್ಯ ವಾಹನ ಸವಾರರ ಸಂಚಾರ ವೆಚ್ಚ ಹೆಚ್ಚಾಗುವ ಸಾಧ್ಯತೆ ಇದೆ. ವಾಹನ ಸವಾರರು ಪ್ರಯಾಣಕ್ಕೂ ಮುನ್ನ ಹೊಸ ಟೋಲ್ ದರಗಳನ್ನು ಗಮನಿಸಿ ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ಸೂಚಿಸಲಾಗಿದೆ.








