ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

Shwetha by Shwetha
July 9, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಸಮಯದಲ್ಲಿ ಮತ ಹಾಕಿಸಿಕೊಳ್ಳುವಾಗ ಮುಸ್ಲಿಮರು ಸ್ಥಳೀಯರಾಗಿ ಕಂಡಿದ್ದರು, ಆದರೆ ಈಗ ರಾಜಕೀಯ ಕಾರಣಕ್ಕಾಗಿ ಅವರನ್ನು ಬಾಂಗ್ಲಾದೇಶದವರು ಎಂದು ಕರೆಯುತ್ತಿರುವುದು ಕುಮಾರಸ್ವಾಮಿ ಅವರ ದ್ವಂದ್ವ ನೀತಿಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ಕಿಡಿಕಾರಿದ್ದಾರೆ.

ನಗರದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಾಲಕೃಷ್ಣ, ಎಸ್‌ಐಆರ್ ಅಂದರೆ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಒಂದು ಕೋಮಿನ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಾ, ಜನರಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

Related posts

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

July 9, 2026
ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

July 9, 2026

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗಿರುವ ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಎಚ್‌ಡಿಕೆ ಗುರಿ ಮಾಡುತ್ತಿರುವುದು ಖಂಡನೀಯ. ಈ ಪ್ರಕ್ರಿಯೆಯು ಸಂಪೂರ್ಣವಾಗಿ ಕೇಂದ್ರ ಚುನಾವಣಾ ಆಯೋಗದ ಅಡಿಯಲ್ಲಿ ನಡೆಯುತ್ತಿದೆ. ಇದು ರಾಜ್ಯ ಸರ್ಕಾರದ ನಿಯಂತ್ರಣದಲ್ಲಿಲ್ಲ ಎಂಬ ಸತ್ಯ ಗೊತ್ತಿದ್ದರೂ, ಅಧಿಕಾರಿಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಯುತ್ತಿದೆ. ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ಅವಮಾನ ಮಾಡುವುದು ಸರಿಯಲ್ಲ ಎಂದು ಅವರು ಎಚ್ಚರಿಸಿದರು.

ಚುನಾವಣಾ ಆಯೋಗದ ಕಟ್ಟುನಿಟ್ಟಿನ ನಿಯಮಗಳ ಪ್ರಕಾರವೇ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿದೆ. ಅಗತ್ಯ ದಾಖಲೆಗಳನ್ನು ಒದಗಿಸದೆ ಮತದಾರರ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇಂತಹ ಪಾರದರ್ಶಕ ವ್ಯವಸ್ಥೆಯಲ್ಲಿ ಅಕ್ರಮ ಎಸಗಲು ಹೇಗೆ ಸಾಧ್ಯ? ಕೇವಲ ರಾಜಕೀಯ ಪ್ರಚಾರಕ್ಕಾಗಿ ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಬಾಲಕೃಷ್ಣ ಅವರು ಕುಮಾರಸ್ವಾಮಿ ಅವರ ಹೇಳಿಕೆಗಳನ್ನು ತಳ್ಳಿಹಾಕಿದರು.

ShareTweetSendShare
Join us on:

Related Posts

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

by Shwetha
July 9, 2026
0

ನಿತಿನ್ ಗಡ್ಕರಿ ಅವರು, E20 ಪೆಟ್ರೋಲ್‌ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, E20 ಪೆಟ್ರೋಲ್‌ನಿಂದ ಯಾವುದೇ ಕಾರಿಗೆ ಸಮಸ್ಯೆಯಾಗಿದೆ ಎಂಬುದಕ್ಕೆ ಪುರಾವೆಗಳಿಲ್ಲ....

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

by Shwetha
July 9, 2026
0

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ....

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

by Shwetha
July 9, 2026
0

ಶಿರಾಡಿ ಘಾಟ್‌ ಸೇರಿದಂತೆ ಹಾಸನ ಜಿಲ್ಲೆಯ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ-75 (NH-75)ಯಲ್ಲಿ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಈ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಫುಟ್‌ಪಾತ್ ತೆರವು ಬಳಿಕ GBAಯಿಂದ ವಿಶೇಷ ಸ್ವಚ್ಛತಾ ಅಭಿಯಾನ

by Shwetha
July 9, 2026
0

ಬೆಂಗಳೂರು ನಗರದಲ್ಲಿ ಫುಟ್‌ಪಾತ್‌ ತೆರವು ಕಾರ್ಯಾಚರಣೆಯ ಬೆನ್ನಲ್ಲೇ, GBA ನಗರವ್ಯಾಪಿ ವಿಶೇಷ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಸಜ್ಜಾಗಿದೆ. ಈ ಅಭಿಯಾನದಡಿ ರಸ್ತೆಬದಿಯ ಕಟ್ಟಡ ನಿರ್ಮಾಣ ತ್ಯಾಜ್ಯ ಹಾಗೂ...

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

by Shwetha
July 9, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ರಾಜ್ಯ ಸರ್ಕಾರದ ನಡುವಿನ ಸೈದ್ಧಾಂತಿಕ ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram