ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದ ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ (PG) ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆಗಳ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಮಾತನಾಡಿ, ಭಾಷೆ ಕೇವಲ ಸಂವಹನದ ಸಾಧನವಲ್ಲ, ಅದು ವ್ಯಕ್ತಿಯ ಚಿಂತನೆಯನ್ನು ವಿಸ್ತರಿಸುವ ಶಕ್ತಿಯಾಗಿದೆ.
ಪದವಿ ಹಾಗೂ ಸ್ನಾತಕೋತ್ತರ ಹಂತದಲ್ಲಿ ಭಾಷೆ ಮತ್ತು ಸಾಹಿತ್ಯ ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.
ಸಾಮಾಜಿಕ ಮೌಲ್ಯಗಳು, ಸಂಸ್ಕೃತಿ ಹಾಗೂ ಚಿಂತನೆಗಳನ್ನು ಮುಂದಿನ ತಲೆಮಾರಿಗೆ ಪರಿಣಾಮಕಾರಿಯಾಗಿ ವರ್ಗಾಯಿಸಲು ಕನ್ನಡ ಬೋಧನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದು ಅಗತ್ಯ ಎಂದು ಅವರು ಒತ್ತಾಯಿಸಿದ್ದಾರೆ.
ಇದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಶಿಫಾರಸೆಯಾಗಿದ್ದು, ಸರ್ಕಾರದಿಂದ ಇನ್ನೂ ಅಂತಿಮ ನಿರ್ಧಾರ ಪ್ರಕಟವಾಗಿಲ್ಲ.







