ಸಚಿವರಿಂದ ಪಿಪಿಇ ಕಿಟ್ ಗಳಿಂದ ಬೆಡ್ ಗಳವರೆಗೂ ಭ್ರಷ್ಟಾಚಾರ : ಡಿ.ಕೆ ಶಿವಕುಮಾರ್ ಆಕ್ರೋಶ
ಬೆಂಗಳೂರು : ಬಿಜೆಪಿ ಸರ್ಕಾರ ಕೊರೊನಾ ಸಂಕಷ್ಟ ಸಂದರ್ಭವನ್ನೂ ಲೂಟಿ ಮಾಡಲು ಬಳಸಿಕೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಡಿಕೆಶಿ, ‘ವೆಂಟಿಲೇಟರ್ ಸಿಗದೆ ಕರ್ನಾಟಕದ ಕೊರೊನಾ ಸೋಂಕಿತರು ಸಾಯುತ್ತಿದ್ದಾರೆ. ಬಿಜೆಪಿ ಮಂತ್ರಿಗಳು ಪಿಪಿಇ ಕಿಟ್ ಗಳಿಂದ ಹಿಡಿದು ಬೆಡ್ ಗಳವರೆಗೂ ಎಲ್ಲಾ ಕೊರೊನಾ ಚಿಕಿತ್ಸೆ ಸಲಕರಣೆಗಳ ಖರೀದಿ ಭ್ರಷ್ಟಾಚಾರದಲ್ಲಿ
ಮುಳುಗಿ ಹೋಗಿದ್ದಾರೆ. ಬಿಜೆಪಿ ಸರ್ಕಾರ ಕೊರೊನಾ ಸಂಕಷ್ಟ ಸಂದರ್ಭವನ್ನೂ ಲೂಟಿ ಮಾಡಲು ಬಳಸಿಕೊಂಡಿದೆ.
‘ವೆAಟಿಲೇಟರ್ ಖರೀದಿಯಲ್ಲಿ ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಜಗಜ್ಜಾಹೀರಾಗಿದೆ. ತಮಿಳುನಾಡು ಸರ್ಕಾರ ತಲಾ 4.78 ಲಕ್ಷ ರೂ.ಗೆ ಖರೀದಿಸಿದ ವೆಂಟಿಲೇಟರ್ ಗೆ ಕರ್ನಾಟಕ ಸರ್ಕಾರ 18.20 ಲಕ್ಷ ರೂ. ಕೊಟ್ಟಿದೆ. ಈ ಕೊರೊನಾ ಭ್ರಷ್ಟಾಚಾರದ ಕುರಿತು ಸಿಎಂ ಉತ್ತರ ಕೊಡಬೇಕಿದೆ’ ಎಂದು ಆಗ್ರಹಿಸಿದ್ದಾರೆ.








