ADVERTISEMENT
Saturday, September 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bengaluru : ಹಸಿರಿಗೆ ಹಾಯ್, ಪ್ಲಾಸ್ಟಿಕ್‌ಗೆ ಗುಡ್‌ ಬೈ,: ಬೆಂಗಳೂರಿನಲ್ಲಿ ಮೊದಲ ಕ್ಲೈಮೇಟ್ ಆಕ್ಷನ್ ವಾಕ್ & ರನ್ 🏃‍♂️🌱

admin by admin
July 13, 2026
in Newsbeat, State, ಬೆಂಗಳೂರು
climate action wak and run

climate action wak and run

Share on FacebookShare on TwitterShare on WhatsappShare on Telegram

ಬೆಂಗಳೂರು: ಹವಾಮಾನ ಬದಲಾವಣೆ, ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಜೀವನಶೈಲಿಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಸಿರೋತ್ಸವ ಫೋರಂ, ಸುರಕ್ಷಾ ಎನ್ವಿರೋ ಸೊಲ್ಯೂಷನ್ಸ್ ಹಾಗೂ ಕರ್ನಾಟಕ ಜೆಸ್ಯೂಟ್ ಪ್ರಾಂತ್ಯ ಪರಿಸರ ಆಯೋಗದ ಸಂಯುಕ್ತ ಆಶ್ರಯದಲ್ಲಿ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ ಭಾಗವಾಗಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಬೆಂಗಳೂರಿನ ಮೊದಲ ಸಂಪೂರ್ಣ ಪ್ಲಾಸ್ಟಿಕ್-ಮುಕ್ತ ‘ಕ್ಲೈಮೇಟ್ ಆಕ್ಷನ್ ವಾಕ್ & ರನ್–2026’ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ಡಾ. ವಿಜಯಲಕ್ಷ್ಮಿ, ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗದ ಮಾಜಿ ಅಧ್ಯಕ್ಷೆ ಪ್ರೊ. ನಂದಿನಿ, ಸುರಕ್ಷಾ ಎನ್ವಿರೋ ಸೊಲ್ಯೂಷನ್ಸ್ ಸಂಸ್ಥಾಪಕ ಡಾ. ಬಾಲಗಂಗಾಧರ್, ಮೌಂಟ್ ಕಾರ್ಮೆಲ್ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕಿ ಹಾಗೂ ವಿಭಾಗ ಮುಖ್ಯಸ್ಥೆ ಡಾ. ಹೆಲೆನ್ ರೋಸೆಲೀನ್ ಮತ್ತು ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ (SJU)ದ ಪರಿಸರ ವಿಜ್ಞಾನ ವಿಭಾಗ ಡಾ. ಲುಮ್ನೇಶ್ ಸ್ವರೂಪ್ ಕುಮಾರ್ ಜೋಸೆಫ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ಹಿರಿಯ ಪರಿಸರ ಅಧಿಕಾರಿ ಡಾ. ವಿಜಯಲಕ್ಷ್ಮಿ, ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ಸರ್ಕಾರದ ಕ್ರಮಗಳ ಜೊತೆಗೆ ಸಾರ್ವಜನಿಕರ ಪಾಲ್ಗೊಳ್ಳುವಿಕೆಯೂ ಅಗತ್ಯವಾಗಿದೆ. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಹಾಗೂ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದರು.

Related posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

September 25, 2026
ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

September 25, 2026

ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗದ ಮಾಜಿ ಅಧ್ಯಕ್ಷೆ ಪ್ರೊ. ನಂದಿನಿ ಮಾತನಾಡಿ, ಪರಿಸರ ಶಿಕ್ಷಣವು ಪಠ್ಯಕ್ರಮಕ್ಕೆ ಮಾತ್ರ ಸೀಮಿತವಾಗದೆ ಜೀವನದ ಭಾಗವಾಗಬೇಕು. ಪರಿಸರ ಸಂರಕ್ಷಣೆಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದರು.

ಸುರಕ್ಷಾ ಎನ್ವಿರೋ ಸೊಲ್ಯೂಷನ್ಸ್ ಸಂಸ್ಥಾಪಕ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಮುಖ್ಯ ವೈಜ್ಞಾನಿಕ ಅಧಿಕಾರಿ ಡಾ. ಬಾಲಗಂಗಾಧರ್ ಅವರು, ಹವಾಮಾನ ಬದಲಾವಣೆಯ ಸವಾಲುಗಳನ್ನು ಎದುರಿಸಲು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮಗಳು ಅತ್ಯಗತ್ಯ. ಪ್ಲಾಸ್ಟಿಕ್-ಮುಕ್ತ ಕಾರ್ಯಕ್ರಮಗಳು ಸಮಾಜದಲ್ಲಿ ಸುಸ್ಥಿರ ಬದಲಾವಣೆಗೆ ದಾರಿ ಮಾಡಿಕೊಡಲಿವೆ ಎಂದು ಅಭಿಪ್ರಾಯಪಟ್ಟರು.

ಪ್ಲಾಸ್ಟಿಕ್‌ಗೆ ಸಂಪೂರ್ಣ ವಿದಾಯ
ಕಾರ್ಯಕ್ರಮವನ್ನು ಸಂಪೂರ್ಣವಾಗಿ ಪ್ಲಾಸ್ಟಿಕ್-ಮುಕ್ತವಾಗಿ ಆಯೋಜಿಸಲಾಗಿತ್ತು. ಏಕಬಳಕೆ ಪ್ಲಾಸ್ಟಿಕ್ ಬಳಸದೆ, ಭಾಗವಹಿಸಿದವರಿಗೆ ಮರುಬಳಕೆ ಮಾಡಬಹುದಾದ ಗ್ಲಾಸ್ ಹಾಗೂ ಸ್ಟೀಲ್ ಪಾತ್ರೆಗಳಲ್ಲಿ ಉಪಾಹಾರ ವಿತರಿಸಲಾಯಿತು. ಓಟಗಾರರಿಗೆ ನೀಡಿದ ರೇಸ್ ಬಿಬ್ ಹಾಗೂ ಕೈಪಟ್ಟಿಗಳು ‘ಬೀಜದ ಕಾಗದ’ (Seed Paper) ಬಳಸಿ ತಯಾರಿಸಲಾಗಿದ್ದು, ಅವುಗಳನ್ನು ಬಳಕೆ ನಂತರ ಮಣ್ಣಿನಲ್ಲಿ ನೆಟ್ಟರೆ ಸಸ್ಯಗಳು ಅಥವಾ ಹೂವಿನ ಗಿಡಗಳು ಬೆಳೆಯುವಂತೆ ತಯಾರಿಸಲಾಗಿದೆ. ಕುಡಿಯುವ ನೀರಿಗಾಗಿ ಸಂಪೂರ್ಣವಾಗಿ ಬಯೋಡಿಗ್ರೇಡಬಲ್ (Biodegradable) ಗ್ಲಾಸ್‌ಗಳನ್ನು ಬಳಸಲಾಗಿತ್ತು. ಸಾಮಾನ್ಯವಾಗಿ ಈ ರೀತಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಟಿ ಶರ್ಟ್ ನೀಡಲಾಗುವುದು. ಆದ್ರೆ ಸಂಘಟಕರು ಬಟ್ಟೆ ತ್ಯಾಜ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಬಾರಿ ಭಾಗವಹಿಸಿದವರಿಗೆ ಟಿ-ಶರ್ಟ್‌ಗಳನ್ನುಗಳನ್ನು ವಿತರಿಸಲಿಲ್ಲ. ಅದರ ಬದಲು ಭಾಗವಹಿಸಿದ ಪ್ರತಿಯೊಬ್ಬರಿಗೂ ಸಸಿಗಳನ್ನು ನೆನಪಿನ ಕಾಣಿಕೆಯಾಗಿ ವಿತರಿಸಲಾಯಿತು.

‘ಹಸಿರೇ ಉಸಿರು – ನಮ್ಮ ಜವಾಬ್ದಾರಿ’
ಹಸಿರೋತ್ಸವ ಫೋರಂನ ಸಹ-ಸಂಸ್ಥಾಪಕಿ ಹಾಗೂ ನಿರ್ದೇಶಕಿ ಆರತಿ ಆರ್. ಮಾತನಾಡಿ, ಪರಿಸರ ಜವಾಬ್ದಾರಿಯನ್ನು ಕಾಪಾಡುತ್ತಲೇ ದೊಡ್ಡ ಪ್ರಮಾಣದ ಸಾರ್ವಜನಿಕ ಕಾರ್ಯಕ್ರಮಗಳನ್ನು ಸಂಪೂರ್ಣ ಪ್ಲಾಸ್ಟಿಕ್‌ ಮುಕ್ತವಾಗಿ ಯಶಸ್ವಿಯಾಗಿ ಆಯೋಜಿಸಬಹುದು ಎಂಬುದನ್ನು ಈ ಕಾರ್ಯಕ್ರಮ ತೋರಿಸಿದೆ. “ಹಸಿರೇ ಉಸಿರು – ನಮ್ಮ ಜವಾಬ್ದಾರಿ” ಎಂಬ ಧ್ಯೇಯದೊಂದಿಗೆ ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸುವುದು ಹಾಗೂ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಇಂತಹ ಸಣ್ಣ ಪ್ರಯತ್ನಗಳೇ ಭವಿಷ್ಯದಲ್ಲಿ ದೊಡ್ಡ ಪರಿಸರ ಬದಲಾವಣೆಗೆ ಕಾರಣವಾಗಲಿವೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪರಿಸರ ಪ್ರೇಮಿಗಳು, ವೃತ್ತಿಪರ ಓಟಗಾರರು, ಕಾರ್ಪೊರೇಟ್ ವಲಯದ ಪ್ರತಿನಿಧಿಗಳು, ಹಿರಿಯ ನಾಗರಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಸೇರಿದಂತೆ 1,000ಕ್ಕೂ ಹೆಚ್ಚು ಆಸಕ್ತರು ಭಾಗವಹಿಸಿದ್ದರು. 4 ವರ್ಷದ ಮಗುವಿನಿಂದ 95 ವರ್ಷದ ಹಿರಿಯ ನಾಗರಿಕರವರೆಗೆ ವಿವಿಧ ವಯೋಮಾನದ ಜನರು ಭಾಗವಹಿಸಿದ್ದು ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು.

ಹಸಿರೋತ್ಸವ ತಂಡ, ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ‘ಬೆಂಬಲ’ ತಂಡ ಹಾಗೂ ಮೌಂಟ್ ಕಾರ್ಮೆಲ್ ವಿಶ್ವವಿದ್ಯಾಲಯದ ‘ಇಕೋ ವಾರಿಯರ್ಸ್’ ತಂಡದ ಸ್ವಯಂಸೇವಕರು ‘ವಾಕ್ & ರನ್’ ಕಾರ್ಯಕ್ರಮದ ಯಶಸ್ವಿ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದರು.

Tags: #ClimateAction #NammaBengaluru #PlasticFreeBangalore #Hasirotsava2026 #GreenBengaluru #EcoFriendlyEvent #SaveEnvironment #ClimateRun #KannadaArticles #SanathRai #GoGreen #SeedPaper #LakeRejuvenation
ShareTweetSendShare
Join us on:

Related Posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

by Shwetha
September 25, 2026
0

ಹಳೆಯ ಚಿನ್ನ ಖರೀದಿ ಮತ್ತು ಅಡವಿಟ್ಟ ಚಿನ್ನ ಬಿಡಿಸಿಕೊಡುವ ಹೆಸರಿನಲ್ಲಿ ಜನಪ್ರಿಯವಾಗಿದ್ದ ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ...

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

by Shwetha
September 25, 2026
0

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಡವಳಿಕೆ ಮತ್ತು ಕಾರ್ಯವೈಖರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

by Shwetha
September 25, 2026
0

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಭವಿಷ್ಯದ ಬಗ್ಗೆ ಈಗ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ಆರಂಭವಾಗಿದೆ. ಬರಗಾಲದ ನೆಪವೊಡ್ಡಿ ಗ್ಯಾರಂಟಿ ಯೋಜನೆಗಳನ್ನು ಕೇವಲ ಬಡವರಿಗಷ್ಟೇ ಅಂದರೆ ಬಿಪಿಎಲ್...

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

by Shwetha
September 25, 2026
0

ಟಿ ನರಸೀಪುರ ಘಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸರ್ಕಾರದ ವಿರುದ್ಧ ವಾಗ್ದಾಳಿ...

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

by Shwetha
September 25, 2026
0

ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ನಮಗೆ ಕನಿಷ್ಠ ನಾಗರಿಕ ಪ್ರಜ್ಞೆ ಇರಬೇಕಲ್ಲವೇ? ಇತರರ ವೈಯಕ್ತಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವುದು ಎಷ್ಟು ಸರಿ? ಇಂತಹ ಹತ್ತಾರು ಪ್ರಶ್ನೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram