ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದ್ದು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆಯಿಂದ ಹಾರ್ಮುಜ್ ಜಲಸಂಧಿಯ ಹಡಗು ಸಂಚಾರದ ಮೇಲೆ ಪರಿಣಾಮ ಉಂಟಾಗಿರುವುದು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ.
ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ ಸುಮಾರು 79 ಡಾಲರ್‌ಗೆ ಏರಿಕೆಯಾಗಿದೆ. ಇರಾನ್ ವಿರುದ್ಧ ಅಮೆರಿಕ ದಾಳಿ ಆರಂಭವಾದ ಬಳಿಕ ಒಂದೇ ದಿನದಲ್ಲಿ ತೈಲ ಬೆಲೆ ಶೇ.4.3ರಷ್ಟು ಏರಿಕೆಯಾಗಿದೆ ಎಂದು ವರದಿಯಾಗಿದೆ.
ಮುಂದಿನ ದಿನಗಳಲ್ಲಿ ಜಾಗತಿಕ ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಕಚ್ಚಾ ತೈಲದ ಬೆಲೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಭಾರತದಲ್ಲಿ ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ ಕಡಿಮೆ ಎಂದು ಮಾರುಕಟ್ಟೆ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.








