ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಅಪರಾಧ

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

Shwetha by Shwetha
July 14, 2026
in ಅಪರಾಧ, Crime, Newsbeat, State, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು ನಗರದಲ್ಲಿ ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬಳು ಗಂಡ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿ ಕ್ರಾಸ್ ಬಳಿ ಈ ದುರಂತ ಸಂಭವಿಸಿದ್ದು, ಮೃತ ದುರ್ದೈವಿಯನ್ನು ಮೂಲತಃ ಕಡೂರಿನ ಶ್ವೇತಾ ಎಂದು ಗುರುತಿಸಲಾಗಿದೆ.

ಹಸಿರು ಚಪ್ಪರ ಒಣಗುವ ಮುನ್ನವೇ ಮಗಳ ಸಾವು

Related posts

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

July 14, 2026
ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

July 14, 2026

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಮೂರ್ತಿ ಎಂಬುವವರನ್ನು ಮದುವೆಯಾಗಿದ್ದರು. ಮದುವೆಯ ಸಂದರ್ಭದಲ್ಲಿ ಶ್ವೇತಾ ಪೋಷಕರು ಶಕ್ತಿಯುತವಾಗಿಯೇ ವರದಕ್ಷಿಣೆ ನೀಡಿ ಮಗಳ ಮದುವೆ ಮಾಡಿಕೊಟ್ಟಿದ್ದರು. ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶ್ವೇತಾ, ಪತಿ ಮೂರ್ತಿ ಜೊತೆ ಸುಂದರ ಬದುಕಿನ ಕನಸು ಕಂಡು ಬೆಂಗಳೂರಿಗೆ ಬಂದಿದ್ದರು. ಆದರೆ ಆ ಕನಸುಗಳು ಕಮರಿ ಹೋಗಲು ಕೇವಲ 120 ದಿನಗಳು ಸಾಕಾಯಿತು.

ನಾದಿನಿಯ ಪೀಡನೆ ಹಾಗೂ ಪತಿಯ ಕುಮ್ಮಕ್ಕು

ದಂಪತಿ ವಾಸವಾಗಿದ್ದ ಮನೆಯ ಸಮೀಪವೇ ಮೂರ್ತಿಯ ಅಕ್ಕ ನರಸಮ್ಮ ವಾಸವಿದ್ದರು. ಆರೋಪದ ಪ್ರಕಾರ, ನರಸಮ್ಮ ಆಗಾಗ್ಗೆ ಶ್ವೇತಾ ಅವರ ಮನೆಗೆ ಬಂದು ಹೆಚ್ಚಿನ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದರು. ಈ ಕಿರುಕುಳಕ್ಕೆ ಪತಿ ಮೂರ್ತಿ ಕೂಡ ಸಾಥ್ ನೀಡುತ್ತಿದ್ದರಿಂದ ಮನೆಯಲ್ಲಿ ಪ್ರತಿದಿನ ಜಗಳವಾಗುತ್ತಿತ್ತು. ಶುಕ್ರವಾರ ಬೆಳಿಗ್ಗೆ ಕೂಡ ದಂಪತಿ ನಡುವೆ ಭೀಕರ ಜಗಳ ನಡೆದಿದೆ. ಇದರಿಂದ ನೊಂದ ಶ್ವೇತಾ ಮನೆಯಿಂದ ಹೊರಗೆ ಹೋಗಿದ್ದರು. ಮಧ್ಯಾಹ್ನ ತಾಯಿ ಬುದ್ಧಿಮಾತು ಹೇಳಿ ಕಳುಹಿಸಿದ ನಂತರ ಮನೆಗೆ ಮರಳಿದ ಶ್ವೇತಾಗೆ, ಪತಿ ಮೂರ್ತಿ ಮನೆಗೆ ಬೀಗ ಹಾಕಿಕೊಂಡು ಹೋಗಿರುವುದು ಕಂಡುಬಂದಿದೆ.

ಕೊನೆಯ ಕ್ಷಣದ ನೋವಿನ ಡೆತ್ ನೋಟ್

ಮನೆಯ ಮಾಲೀಕರಿಂದ ಮತ್ತೊಂದು ಕೀ ಪಡೆದು ಒಳಹೋದ ಶ್ವೇತಾ, ಜೀವನದ ಮೇಲೆ ಜಿಗುಪ್ಸೆಗೊಂಡು ಆತ್ಮಹತ್ಯೆಯ ಹಾದಿ ಹಿಡಿದರು. ಸಾಯುವ ಮುನ್ನ ಬರೆದಿಟ್ಟ ಡೆತ್ ನೋಟ್‌ನಲ್ಲಿ ಅವರ ನೋವು ಆಕ್ರೋಶವಾಗಿ ಹೊರಬಂದಿದೆ. ನನ್ನ ಸಾವಿಗೆ ನನ್ನ ಗಂಡ ಮತ್ತು ಅವರ ಅಕ್ಕನೇ ಕಾರಣ. ಅವರಿಂದ ನನಗೆ ಭರಿಸಲಾಗದ ಹಿಂಸೆ ಆಗುತ್ತಿದೆ. ನನಗೆ ಬದುಕುವ ಆಸೆಯೇ ಇಲ್ಲದಂತೆ ಮಾಡಿದ್ದಾರೆ. ಅಮ್ಮಾ, ನಾನು ಸತ್ತ ಮೇಲೆ ಅವರನ್ನು ಮಾತ್ರ ಸುಮ್ಮನೆ ಬಿಡಬೇಡಿ. ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದು ಬರೆದಿಟ್ಟು ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ.

ರಾತ್ರಿ ಮನೆಗೆ ಬಂದ ಪತಿಗೆ ಕಂಡಿತು ಪತ್ನಿಯ ಶವ

ರಾತ್ರಿ 11 ಗಂಟೆಯಾದರೂ ಮೂರ್ತಿ ಮನೆಗೆ ಬಾರದಿರುವುದನ್ನು ಕಂಡ ಮನೆ ಮಾಲೀಕರು ಫೋನ್ ಮಾಡಿ ಪತ್ನಿ ಬಂದಿರುವ ವಿಷಯ ತಿಳಿಸಿದ್ದಾರೆ. ಮೂರ್ತಿ ಮನೆಗೆ ಬಂದು ಕೀ ಹಾಕಿ ಬಾಗಿಲು ತೆರೆದಾಗ ಶ್ವೇತಾ ಬೆಡ್ ರೂಮ್ ನಲ್ಲಿ ಹೆಣವಾಗಿ ನೇತಾಡುತ್ತಿದ್ದರು. ಇದನ್ನು ಕಂಡು ಆತ ಕೂಗಾಡಲು ಶುರುಮಾಡಿದಾಗ ಅಕ್ಕಪಕ್ಕದವರು ಓಡಿಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕಾಮಾಕ್ಷಿಪಾಳ್ಯ ಪೊಲೀಸರು ಡೆತ್ ನೋಟ್ ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಮಗಳ ಸಾವಿನ ಸುದ್ದಿ ಕೇಳಿ ಸ್ಥಳಕ್ಕೆ ಬಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಶಿಕ್ಷಕಿಯಾಗಿ ಸಮಾಜಕ್ಕೆ ಮಾದರಿಯಾಗಬೇಕಿದ್ದ ಪ್ರತಿಭಾನ್ವಿತ ಯುವತಿ, ವರದಕ್ಷಿಣೆ ಎಂಬ ಪಿಡುಗಿಗೆ ಬಲಿಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. ಓದಿದವರೇ ತುಂಬಿರುವ ಇಂದಿನ ಸಮಾಜದಲ್ಲಿ ಇನ್ನೂ ವರದಕ್ಷಿಣೆಗಾಗಿ ಹೆಣ್ಣನ್ನು ಬಲಿ ಪಡೆಯುತ್ತಿರುವುದು ದುರದೃಷ್ಟಕರ. ಶ್ವೇತಾ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಜನರು ಆಗ್ರಹಿಸುತ್ತಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ.

ShareTweetSendShare
Join us on:

Related Posts

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

by Shwetha
July 14, 2026
0

ಕರ್ನಾಟಕ ಲೋಕಸೇವಾ ಆಯೋಗದ(KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾ‌ರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ, ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಆದೇಶ ಹೊರಡಿಸಿದ್ದಾರೆ. ಅಧ್ಯಕ್ಷರ ವಿರುದ್ಧ ಅಕ್ರಮಗಳು ಹಾಗೂ...

ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

by Shwetha
July 14, 2026
0

ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಅವರ ವಿರುದ್ಧ ಹೊರಡಿಸಲಾಗಿದ್ದ ಗಡಿಪಾರು ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಹಿಂದೆ, ಅಪರಾಧ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಹಣ ಕದ್ದಿರುವುದನ್ನು ಒಪ್ಪಿಕೊಂಡಿದ್ದೀರಾ?ರಾಮ ಭಕ್ತರ ಭಾವನೆಗಳ ಜೊತೆ ಆಟವಾಡಬೇಡಿ: ಆರ್‌ಎಸ್‌ಎಸ್ ಕೇವಲ ವಿಷಾದಿಸಿದರೆ ಸಾಲದು, ಬಹಿರಂಗ ಕ್ಷಮೆ ಕೇಳಲಿ ಎಂದ ಪ್ರಿಯಾಂಕ್ ಖರ್ಗೆ

by Shwetha
July 14, 2026
0

ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ಸಂಗ್ರಹಿಸಲಾದ ದೇಣಿಗೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 14, 2026
0

ದಿನ ಭವಿಷ್ಯ 14-07-2026 ಮೇಷ ರಾಶಿ ಇಂದಿನ ದಿನ ನಿಮಗೆ ಅತ್ಯಂತ ಉತ್ಸಾಹ ಮತ್ತು ಚೈತನ್ಯದಿಂದ ಕೂಡಿರುತ್ತದೆ. ಮಂಗಳವಾರ ನಿಮ್ಮ ರಾಶ್ಯಾಧಿಪತಿಯ ದಿನವಾದ್ದರಿಂದ ನಿಮ್ಮಲ್ಲಿ ನಾಯಕತ್ವದ ಗುಣ...

parama foundation

Bengaluru: ಶಿಕ್ಷಕರ ಪ್ರಗತಿಗೆ ನಾಂದಿ ಹಾಡಿದ ಕ್ಯಾಟಲಿಸ್ಟ್ ಸರ್ಕಲ್: ಪರಮ್ ಫೌಂಡೇಶನ್-ಕಾರ್ನೆಗೀ ಜಂಟಿ ಯಶಸ್ವಿ

by admin
July 13, 2026
0

• ಕಾರ್ನೆಗೀ-ಪರಮ್ ಫೌಂಡೇಶನ್ ಜಂಟಿ ಯಶಸ್ಸು • ವರ್ಷಪೂರ್ತಿ ನಡೆದ ಭವಿಷ್ಯದ ಶಿಕ್ಷಣ ತರಬೇತಿ • ತರಬೇತಿ ಪೂರೈಸಿದ 49 ನವೋದ್ಯಮಿ ಶಿಕ್ಷಕರು ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram