20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿಜ್ಞಾನಿ ಹಾಗೂ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿರುವ ಹಿನ್ನೆಲೆಯಲ್ಲಿ, ಅವರ ಪತ್ನಿ ಗೀತಾಂಜಲಿ ಮಹತ್ವದ ಮನವಿ ಮಾಡಿದ್ದಾರೆ.
ಸಾಮಾಜಿಕ ಜಾಲತಾಣ Xನಲ್ಲಿ ಪ್ರತಿಕ್ರಿಯಿಸಿದ ಅವರು, ತಮ್ಮ ಹಾಗೂ ಕುಟುಂಬದ ಅನುಮತಿ ಇಲ್ಲದೆ ಸೋನಂ ವಾಂಗ್ಚುಕ್ ಅವರಿಗೆ ಯಾವುದೇ ವೈದ್ಯಕೀಯ ಚಿಕಿತ್ಸೆ ನೀಡಬಾರದು ಎಂದು ಆಗ್ರಹಿಸಿದ್ದಾರೆ.
ಕಳೆದ 20 ದಿನಗಳಿಂದ ಅವರ ಆರೋಗ್ಯವನ್ನು ಗಮನಿಸುತ್ತಿರುವ ವೈದ್ಯರು ಹಾಗೂ ಕುಟುಂಬದವರೊಂದಿಗೆ ಸಮಾಲೋಚನೆ ನಡೆಸದೆ ಯಾವುದೇ ಚಿಕಿತ್ಸಾ ಕ್ರಮ ಕೈಗೊಳ್ಳಬಾರದು ಎಂದು ಅವರು ಒತ್ತಾಯಿಸಿದ್ದಾರೆ.
ಈ ನಡುವೆ, ಸೋನಂ ವಾಂಗ್ಚುಕ್ ಅವರ ಆರೋಗ್ಯದ ಮೇಲಿನ ನಿಗಾ ಮುಂದುವರಿದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿರುವ ಕ್ರಮದ ಕುರಿತು ವಿವಿಧ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ.








