ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಬೆಡ್‍ಗಳ ಕೊರತೆ ಎದುರಾಗಿದೆ. ಹೀಗಾಗಿ ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳ ಹೆಚ್ಚುವರಿ ಹಾಸಿಗೆ ಪಡೆಯಲು ರಾಜ್ಯ ಸರ್ಕಾರ ಮುಂದಾಗಿತ್ತು.
ಆದರೆ, ಈ ಹಿಂದೆ ನಡೆದ ಎರಡು ಸಭೆಗಳಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಕ್ಕೆ ನೀಡುವುದಾಗಿ ಭರವಸೆ ನೀಡಿದ್ದ ಬೆಂಗಳೂರಿನ 11 ಖಾಸಗಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳು ಇಲ್ಲಸಲ್ಲದ ನೆಪ ಹೇಳಿ ಕಳ್ಳಾಟ ನಡೆಸಿದ್ದವು. ಈ ಹಿನ್ನೆಲೆಯಲ್ಲಿ ಇಂದು ಮೂರನೇ ಬಾರಿ ಮತ್ತೆ ಖಾಸಗಿ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರ ಜತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಭೆ ನಡೆಸಿದರು.
ಸಭೆಯಲ್ಲಿ ಖಾಸಗಿ ಕಾಲೇಜುಗಳ ಮೊಂಡಾಟಕ್ಕೆ ಸೊಪ್ಪು ಹಾಕದ ಬಿಎಸ್‍ವೈ, ನಾಳೆಯಿಂದ ಎಲ್ಲಾ ಕಾಲೇಜುಗಳು ಶೇ.50ರಷ್ಟು ಬೆಡ್‍ಗಳನ್ನು ಸರ್ಕಾರಕ್ಕೆ ನೀಡಲೇಬೇಕು. ಮತ್ತೆ ಕಳ್ಳಾಟವಾಡಿದರೆ ಆಸ್ಪತ್ರೆಗಳ ಲೈಸೆನ್ಸ್ ರದ್ದು ಮಾಡುವುದು ಸೇರಿದಂತೆ ಕಠಿಣಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.
ಇಂದು ನಡೆದ ಸಭೆ ಇದೇ ಕೊನೆ, ಮತ್ತೆ ಮೀಟಿಂಗ್ ಮಾಡಲ್ಲ. ಇನ್ನೇನಿದ್ರೂ ಕ್ರಮ ಅಷ್ಟೇ ಎಂದು ಗುಟುರು ಹಾಕುತ್ತಿದ್ದಂತೆ ಖಾಸಗಿ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರು ಥಂಡಾ ಹೊಡೆದಿದ್ದಾರೆ.
ನಾಳೆಯಿಂದಲೇ ಶೇ.50ರಷ್ಟು ಹಾಸಿಗೆಗಳನ್ನು ಬಿಟ್ಟು ಕೊಡಲು ಕೆಲ ಕಾಲೇಜುಗಳು ಒಪ್ಪಿಕೊಂಡರೆ, ಮತ್ತೆ ಕೆಲ ಕಾಲೇಜುಗಳು ಶೇ.80ರಷ್ಟು ಬೆಡ್ ನೀಡುವುದಾಗಿ ಸಮ್ಮತಿಸಿವೆ. ಇನ್ನೂ ಕೆಲ ಕಾಲೇಜುಗಳು ಶೇ.100ರಷ್ಟು ಬೆಡ್‍ಗಳನ್ನು ಸರ್ಕಾರಕ್ಕೆ ನೀಡುವುದಾಗಿ ಮಾತು ಕೊಟ್ಟಿವೆ.
ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಭರವಸೆಯನ್ನು ಸಂಪೂರ್ಣ ನಂಬದ ಸಿಎಂ ಯಡಿಯೂರಪ್ಪ, ನಾಳೆಯಿಂದಲೇ ಖಾಸಗಿ ಮೆಡಿಕಲ್ ಕಾಲೇಜುಗಳು ನೀಡುವ ಬೆಡ್‍ಗಳ ಬಗ್ಗೆ ಅಧಿಕಾರಿಗಳು ಪ್ರತಿದಿನ ನಿಗಾವಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
ಬೆಂಗಳೂರಿನ 11 ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ 11 ಸಾವಿರ ಬೆಡ್‍ಗಳು ಲಭ್ಯ ಇವೆ. ಈ ಪೈಕಿ ಶೇ.50ರಷ್ಟು ಹಾಸಿಗೆಗಳನ್ನು ನೀಡಿದರೆ ಸರ್ಕಾರಕ್ಕೆ ಸುಮಾರು 5 ಸಾವಿರ ಹಾಸಿಗೆಗಳು ಲಭ್ಯವಾಗಲಿವೆ. ನಾಳೆಯಿಂದಲಾದರೂ ಖಾಸಗಿ ಮೆಡಿಕಲ್ ಕಾಲೇಜುಗಳ ಹಾಸಿಗೆಗಳು ಸಿಗುತ್ತವಾ ಅಥವಾ ಮತ್ತೆ ಮೊಂಡಾಟ ಮುಂದುವರೆಯುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ
ನವದೆಹಲಿ: ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ನಡೆಯುತ್ತಿದ್ದ ನಿರಂತರ ಗದ್ದಲ ಮತ್ತು ಕೋಲಾಹಲಗಳ ನಡುವೆಯೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ...








