ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ನೀಟ್ ಪ್ರವೇಶ ಪರೀಕ್ಷೆಯನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಅವರ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವೂ ಇದೇ ಬೇಡಿಕೆಯನ್ನು ಮುಂದಿಟ್ಟಿದೆ
ಇದರ ಜೊತೆಗೆ, ಸಂವಿಧಾನದ ಅಡಿಯಲ್ಲಿ ಶಿಕ್ಷಣವನ್ನು ಸಮಕಾಲೀನ ಪಟ್ಟಿಯಿಂದ ರಾಜ್ಯ ಪಟ್ಟಿಗೆ ಸ್ಥಳಾಂತರಿಸಬೇಕು, ಎಂದು ಪಕ್ಷ ಒತ್ತಾಯಿಸಿದೆ. ಇದರಿಂದ ರಾಜ್ಯ ಸರ್ಕಾರಗಳಿಗೆ ವೈದ್ಯಕೀಯ ಶಿಕ್ಷಣ ಹಾಗೂ ಪ್ರವೇಶ ಪ್ರಕ್ರಿಯೆಯ ಮೇಲೆ ಸಂಪೂರ್ಣ ಅಧಿಕಾರ ಸಿಗಲಿದೆ ಎಂದು TVK ಅಭಿಪ್ರಾಯಪಟ್ಟಿದೆ.
ನೀಟ್ ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಕುರಿತು ದೇಶಾದ್ಯಂತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ವಿಜಯ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.







