ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Xನಲ್ಲಿ ವಿಡಿಯೊ ಹಂಚಿಕೊಂಡಿರುವ ಖರ್ಗೆ, ಇಂದು ಸಾವಿರಾರು ಯುವಕರು ಬೀದಿಗಿಳಿದಿದ್ದಾರೆ. ಅವರ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ. ಅನೇಕ ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ. ಆದ್ದರಿಂದ ಶಿಕ್ಷಣ ಸಚಿವರು ರಾಜೀನಾಮೆ ನೀಡುವವರೆಗೆ ಈ ವಿಚಾರದ ಕುರಿತು ಸಂಸತ್ನಲ್ಲಿ ಚರ್ಚೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ನೀಟ್ ಪರೀಕ್ಷೆ ವಿವಾದ ಹಾಗೂ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ವಿಚಾರವಾಗಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಸಂಸತ್ ಒಳಗೂ ಹೊರಗೂ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿವೆ.







