ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.
ಇದೇ ವೇಳೆ, ತಮ್ಮ ವಿರುದ್ಧ ದಾಖಲಾಗಿರುವ FIRಗೆ ತಡೆ ನೀಡುವಂತೆ ಕೋರಿ ಸಿ.ಟಿ. ರವಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಅರ್ಜಿಯ ವಿಚಾರಣೆ ಶೀಘ್ರದಲ್ಲೇ ನಡೆಯುವ ಸಾಧ್ಯತೆಯಿದೆ.
ಮತ್ತೊಂದೆಡೆ, ಬೆಳವಣಿಗೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿರುವ ಸಿ.ಟಿ. ರವಿ ಅವರ ನಿವಾಸದ ಭದ್ರತೆಯನ್ನು ಪೊಲೀಸರು ಹೆಚ್ಚಿಸಿದ್ದಾರೆ.
ಜಾಮಿಯಾ ಮಸೀದಿ ಸಮಿತಿಯ ಅಧ್ಯಕ್ಷ ಮುದಾಸಿರ್ ನೀಡಿದ ದೂರಿನ ಆಧಾರದ ಮೇಲೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಸಿ.ಟಿ. ರವಿ ವಿರುದ್ಧ FIR ದಾಖಲಾಗಿತ್ತು. ಇದೀಗ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯಲಿದೆ.








