ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಪ್ಲೀಟ್ ಲಾಕ್ ಡೌನ್
ಮಂಗಳೂರು : ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಪ್ಲೀಟ್ ಲಾಕ್ ಡೌನ್ ಇರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಜಿಲ್ಲೆಯಲ್ಲಿ ಕೊರೊನಾ ಸ್ಫೋಟ ಹಿನ್ನೆಲೆ ಜುಲೈ 16 ರಿಂದ 23ರವರೆಗೆ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇದರಲ್ಲಿ ಪ್ರತಿದಿನ ಬೆಳಿಗ್ಗೆ 8 ಗಂಟೆಯಿAದ 11ರವರೆಗೆ ದಿನಸಿ ಖರೀದಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ರಿಯಾಯಿತಿ ನೀಡಲಾಗಿತ್ತು. ಆದ್ರೆ ನಾಳೆ ಸಂಡೇ ಲಾಕ್ ಡೌನ್ ಇರುವುದರಿಂದ ಸೋಮವಾರ ಬೆಳಗಿನವರೆಗೂ ಪೂರ್ಣ ಲಾಕ್‌ಡೌನ್ ಜಾರಿ ಮಾಡಲಾಗಿದೆ.
ಇನ್ನು ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಒಟ್ಟು ಸೋಂಕಿತರ ಸಂಖ್ಯೆ 3074ಕ್ಕೆರಿದೆ. ಇದುವರೆಗೂ 71 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.








