ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸುವ ಉದ್ದೇಶದಿಂದ ಹೊಸ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. ಆಗಸ್ಟ್ 1ರಿಂದ ದೇಶದಾದ್ಯಂತ ರೈಲ್ವೆ ನಿಲ್ದಾಣಗಳ ಮೀಸಲಾತಿ ಕೌಂಟರ್ಗಳಲ್ಲಿ ಈ ಹೊಸ ವ್ಯವಸ್ಥೆ ಜಾರಿಯಾಗಲಿದೆ.
ಹೊಸ ನಿಯಮದ ಪ್ರಕಾರ, ತತ್ಕಾಲ್ ಟಿಕೆಟ್ಗಾಗಿ ಟೋಕನ್ ವಿತರಿಸುವ ಸಮಯ ಮತ್ತು ಟಿಕೆಟ್ ಬುಕ್ಕಿಂಗ್ ಆರಂಭವಾಗುವ ಸಮಯವನ್ನು ಒಂದೇ ವೇಳಾಪಟ್ಟಿಗೆ ಹೊಂದಿಸಲಾಗಿದೆ. ಇದರಿಂದ ಪ್ರಯಾಣಿಕರು ಹಲವು ಗಂಟೆಗಳ ಮುಂಚಿತವಾಗಿ ಬಂದು ಉದ್ದ ಸಾಲಿನಲ್ಲಿ ನಿಲ್ಲುವ ಅಗತ್ಯ ಕಡಿಮೆಯಾಗಲಿದೆ.
ಈ ಕ್ರಮದಿಂದ ಮೀಸಲಾತಿ ಕೌಂಟರ್ಗಳಲ್ಲಿ ಉಂಟಾಗುವ ಅನಗತ್ಯ ಜನಸಂದಣಿ ಕಡಿಮೆಯಾಗುವುದರ ಜೊತೆಗೆ, ಟೋಕನ್ ದುರ್ಬಳಕೆ ಹಾಗೂ ಕಾಳಸಂತೆ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯಾಣಿಕರಿಗೆ ಹೆಚ್ಚು ಪಾರದರ್ಶಕ, ವೇಗದ ಮತ್ತು ಸುಲಭ ಸೇವೆ ಒದಗಿಸುವ ಉದ್ದೇಶದಿಂದ ಈ ಬದಲಾವಣೆಗಳನ್ನು ಜಾರಿಗೆ ತರಲಾಗುತ್ತಿದ್ದು, ರೈಲ್ವೆ ನಿಲ್ದಾಣಗಳಲ್ಲಿ ತತ್ಕಾಲ್ ಟಿಕೆಟ್ ಪಡೆಯುವವರಿಗೆ ಇದು ಹೆಚ್ಚಿನ ಅನುಕೂಲವಾಗಲಿದೆ.








