ಬಾಲಿವುಡ್ ನಟ ಸುದೇಶ್ ಬೆರ್ರಿ ಅವರು ಪ್ರಧಾನಿ ನರೇಂದ್ರ ಮೋದಿ ಕುರಿತು ನೀಡಿದ ಹೇಳಿಕೆ ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಮೋದಿ ವಿಷ್ಣುವಿನ ಅವತಾರ. ನನಗೆ ಅವಕಾಶ ಸಿಕ್ಕರೆ ಅವರ ಪಾದಗಳನ್ನು ತೊಳೆದು ಆ ನೀರನ್ನು ಕುಡಿಯುತ್ತೇನೆ. ನಾನು ಕಾಣದ ದೇವರಂತೆ ಮೋದಿಯನ್ನು ಪೂಜಿಸುತ್ತೇನೆ ಎಂದು ಹೇಳಿದ್ದಾರೆ.
ಇದೇ ವೇಳೆ CJP ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಮೋದಿ ನಿಜವಾಗಿ ಏನು ತಪ್ಪು ಮಾಡಿದ್ದಾರೆ? ದೇಶದ ಪ್ರಗತಿಗೆ ಅಡ್ಡಿಯಾಗುತ್ತಿರುವ ಕೆಲವು ನಿಷ್ಪ್ರಯೋಜಕ ವ್ಯಕ್ತಿಗಳೇ ಅವರನ್ನು ನಿರಂತರವಾಗಿ ಟೀಕಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಸುದೇಶ್ ಬೆರ್ರಿ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.








