ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದ ವಿಡಿಯೋ ವೈರಲ್ ಆದ ಬಳಿಕ, ಸಂಬಂಧಿತ ಬಾಲಕಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾಳೆ.
ತಾನು ಹಂಚಿಕೊಂಡಿರುವ ವಿಡಿಯೋದಲ್ಲಿ, ತಾನು 15 ವರ್ಷದ ವಿದ್ಯಾರ್ಥಿನಿ ಎಂದು ಪರಿಚಯಿಸಿಕೊಂಡು ಕೈಮುಗಿದು ಕ್ಷಮೆ ಕೋರಿದ್ದಾಳೆ. ಪ್ರತಿಭಟನಾ ಸ್ಥಳದಲ್ಲಿದ್ದ ಜನರ ಪ್ರಭಾವದಿಂದ ಆ ರೀತಿಯ ಹೇಳಿಕೆಗಳನ್ನು ನೀಡಿದ್ದೇನೆ ಎಂದು ಅವಳು ತಿಳಿಸಿದ್ದಾಳೆ.
ನಾನು ತುಂಬಾ ಅಸಭ್ಯವಾಗಿ ಮಾತನಾಡಿದ್ದೇನೆ. ಇದು ನನ್ನ ಮೊದಲ ಹಾಗೂ ಕೊನೆಯ ತಪ್ಪು. ನಾನು ದೇಶದ ಜನರ ಬಳಿ ಕ್ಷಮೆಯಾಚಿಸುತ್ತೇನೆ. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ವಿಡಿಯೋದಲ್ಲಿ ಮನವಿ ಮಾಡಿದ್ದಾಳೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ವಿವಿಧ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.








