ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

Shwetha by Shwetha
August 3, 2026
in ದೇಶ - ವಿದೇಶ, National, Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಬಿಜೆಪಿಯ ಪ್ರಖರ ವಾಗ್ಮಿ ಮತ್ತು ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಎಕ್ಸ್ ಖಾತೆಯ ಪರಿಚಯದ ಪುಟದಿಂದ (Bio) ಬಿಜೆಪಿ ರಾಷ್ಟ್ರೀಯ ವಕ್ತಾರ ಎಂಬ ಉಲ್ಲೇಖವನ್ನು ತೆಗೆದುಹಾಕಿರುವುದು ಈಗ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಪೂನಾವಾಲಾ ಅವರು ಹಂಚಿಕೊಂಡಿರುವ ವಿಡಿಯೋ ಸಂದೇಶವು ವಿರೋಧ ಪಕ್ಷಗಳಿಗೆ ಚುರುಕು ಮುಟ್ಟಿಸುವಂತಿದೆ.

ವಿಡಿಯೋದಲ್ಲಿ ಮಾತನಾಡಿದ ಪೂನಾವಾಲಾ, ಪ್ರಧಾನಿ ಮೋದಿ ಅವರು ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ ಎಂದು ವ್ಯಂಗ್ಯವಾಗಿ ಹೇಳುವ ಮೂಲಕ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳಿಗೆ ಟಾಂಗ್ ನೀಡಿದ್ದಾರೆ. ಇತ್ತೀಚೆಗೆ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್ ಪ್ರತಿಭಟನೆ ವೇಳೆ ಕೆಲವು ವಿದ್ಯಾರ್ಥಿಗಳು ಪ್ರಧಾನಿ ಮೋದಿ ಮತ್ತು ಅವರ ದಿವಂಗತ ತಾಯಿಯ ಬಗ್ಗೆ ಅತ್ಯಂತ ಅವಹೇಳನಕಾರಿ ಮಾತುಗಳನ್ನು ಬಳಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮೋದಿ, ಅವರು ಮಕ್ಕಳು, ತಪ್ಪು ಮಾಡುತ್ತಾರೆ, ಅವರನ್ನು ಕ್ಷಮಿಸಿ ಎಂದು ಹೇಳಿದ್ದರು. ಈ ಘಟನೆಯನ್ನು ಉಲ್ಲೇಖಿಸಿದ ಪೂನಾವಾಲಾ, ತನ್ನ ತಾಯಿಯನ್ನೇ ನಿಂದಿಸಿದವರನ್ನು ಕ್ಷಮಿಸುವ ವ್ಯಕ್ತಿ ಸರ್ವಾಧಿಕಾರಿ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

Related posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

August 3, 2026
ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

August 3, 2026

ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧವೂ ಕಿಡಿಕಾರಿದ ಅವರು, ಸರ್ವಾಧಿಕಾರ ಮತ್ತು ತುರ್ತು ಪರಿಸ್ಥಿತಿಯ ಬಗ್ಗೆ ಕಲಿಯಬೇಕೆಂದರೆ ರಾಹುಲ್ ಗಾಂಧಿ ಅವರ ಬಳಿ ಹೋಗಬೇಕು. ಇಂದಿರಾ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರು ವಿರೋಧ ಪಕ್ಷಗಳ ಧ್ವನಿಯನ್ನು ಹೇಗೆ ಅಡಗಿಸುತ್ತಿದ್ದರು ಮತ್ತು ಮಾತಿನ ಸ್ವಾತಂತ್ರ್ಯವನ್ನು ಹೇಗೆ ಕಿತ್ತುಕೊಂಡಿದ್ದರು ಎಂಬುದು ಇತಿಹಾಸದಲ್ಲಿ ದಾಖಲಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಸಣ್ಣಪುಟ್ಟ ವಿಚಾರಗಳಿಗೂ ಜನರ ಮೇಲೆ ಕೇಸ್ ದಾಖಲಿಸಲಾಗುತ್ತಿದೆ ಎಂದು ಪೂನಾವಾಲಾ ದೂರಿದ್ದಾರೆ. ಕೇರಳದಲ್ಲಿ ರಾಹುಲ್ ಗಾಂಧಿ ವಿರುದ್ಧ ಇನ್‌ಸ್ಟಾಗ್ರಾಮ್ ಪೋಸ್ಟ್ ಹಾಕಿದ ವ್ಯಕ್ತಿಯ ಮೇಲೆ ಮತ್ತು ಕರ್ನಾಟಕದಲ್ಲಿ ಪೋಸ್ಟರ್ ಪ್ರಕರಣ ಹಾಗೂ ರ್ಯಾಪ್ ಕಲಾವಿದನ ಮೇಲೆ ಪೊಲೀಸ್ ಕ್ರಮ ಕೈಗೊಂಡಿರುವುದನ್ನು ಅವರು ಉದಾಹರಿಸಿದ್ದಾರೆ. ಮಕ್ಕಳನ್ನು ಕ್ಷಮಿಸುವ ಮೋದಿ ಸರ್ಕಾರ ಒಂದೆಡೆಯಾದರೆ, ವಿಮರ್ಶೆಯನ್ನು ಸಹಿಸದ ಕಾಂಗ್ರೆಸ್ ಸರ್ಕಾರ ಇನ್ನೊಂದೆಡೆಯಿದೆ ಎಂದು ಅವರು ತುಲನೆ ಮಾಡಿದ್ದಾರೆ.

2017ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಶೆಹಜಾದ್ ಪೂನಾವಾಲಾ ಅವರು ಪಕ್ಷದ ಪ್ರಮುಖ ಮುಸ್ಲಿಂ ಮುಖವಾಗಿ ಗುರುತಿಸಿಕೊಂಡಿದ್ದರು. ಈಗ ಇದ್ದಕ್ಕಿದ್ದಂತೆ ಅವರು ತಮ್ಮ ಸಾಮಾಜಿಕ ಜಾಲತಾಣದ ಬಯೋ ಬದಲಿಸಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಅವರು ವಕ್ತಾರ ಸ್ಥಾನದಿಂದ ದೂರವಾಗಿದ್ದಾರೆಯೇ ಅಥವಾ ಪಕ್ಷವು ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡಲಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ShareTweetSendShare
Join us on:

Related Posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

by Shwetha
August 3, 2026
0

ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಬಣ್ಣದ ಜರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ...

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

by Shwetha
August 3, 2026
0

ಭ್ರಷ್ಟತೆಯಿಂದ ಕೂಡಿದ ಪರೀಕ್ಷಾ ವ್ಯವಸ್ಥೆಯನ್ನು ದೇಶದ ಯುವಜನತೆಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಕ್ಷಮೆ ಯಾಚಿಸಬೇಕೇ ಹೊರತು ಅವರಿಗೆ ಕ್ಷಮಾದಾನ ನೀಡುವುದಲ್ಲ ಎಂದು ಕಾಂಗ್ರೆಸ್...

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

by Shwetha
August 3, 2026
0

ಖಾಲಿ ನಿವೇಶನಗಳನ್ನು ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಐದು ವರ್ಷಗಳ ಒಳಗಾಗಿ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಸರ್ಕಾರವೇ ವಾಪಸ್ ಪಡೆಯುವುದು ಅಥವಾ...

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

by Shwetha
August 3, 2026
0

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಮತ್ತು ರೈತರ ಭೂಮಿಯನ್ನು ಉಳಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹಮ್ಮಿಕೊಂಡಿದ್ದ ಹೋರಾಟವು ಈಗ ಮತ್ತಷ್ಟು ತೀವ್ರತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram