ನೂತನ ಸಚಿವ ಸಂಪುಟದಲ್ಲಿ ಯಾವುದೇ ಹಿರಿಯ ನಾಯಕರನ್ನು ಕಡೆಗಣಿಸಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಹಿರಿಯರು ಹಾಗೂ ಕಿರಿಯರು ಎಲ್ಲರಿಗೂ ಅವಕಾಶ ನೀಡುವ ಪ್ರಯತ್ನ ಮಾಡಲಾಗಿದೆ. ಆದರೆ ಸಚಿವ ಸ್ಥಾನಗಳು ಸೀಮಿತವಾಗಿರುವುದರಿಂದ ಕೆಲವರನ್ನು ಕೈಬಿಡುವುದು ಅನಿವಾರ್ಯವಾಗುತ್ತದೆ. ಇದರಿಂದ ಸಣ್ಣಪುಟ್ಟ ಅಸಮಾಧಾನ ಉಂಟಾಗುವುದು ಸಹಜ ಎಂದು ಹೇಳಿದರು.
ಇದೇ ವೇಳೆ, ಮಹಿಳೆಯರಿಗೂ ಒಂದು ಸಚಿವ ಸ್ಥಾನ ನೀಡಲಾಗಿದೆ ಎಂದು ತಿಳಿಸಿದ ಅವರು, ಕೊನೆಯ ಕ್ಷಣದಲ್ಲಿ ಒಂದು ಸಚಿವ ಸ್ಥಾನವನ್ನು ಖಾಲಿ ಇರಿಸಲಾಗಿದೆ. ಆ ಸ್ಥಾನ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆಯ ಬಳಿಕ ಪಕ್ಷದಲ್ಲಿ ಅಸಮಾಧಾನದ ಸುದ್ದಿಗಳ ನಡುವೆ, ಎಲ್ಲ ವರ್ಗಗಳಿಗೂ ಸಮತೋಲನದ ಪ್ರತಿನಿಧಿತ್ವ ನೀಡಲು ಪ್ರಯತ್ನಿಸಲಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.








