ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಒಪ್ಪಿರುವುದಾಗಿ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಗಸ್ಟ್ 14ರಂದು ನಡೆಯಲಿರುವ ಉಪಸಭಾಪತಿ ಚುನಾವಣೆಯ ಬಳಿಕ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಇದೇ ವೇಳೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರವಾಣಿ ಮೂಲಕ ಸಂಪರ್ಕಿಸಿ, ಇದು ಪಕ್ಷದ ಹೈಕಮಾಂಡ್‌ನ ನಿರ್ಧಾರ. ನೀವು ರಾಜೀನಾಮೆ ನೀಡಿ ಎಂದು ಮನವಿ ಮಾಡಿರುವುದಾಗಿ ಹೊರಟ್ಟಿ ಬಹಿರಂಗಪಡಿಸಿದ್ದಾರೆ.
ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ವಿಧಾನ ಪರಿಷತ್‌ನ ಮುಂದಿನ ಸಭಾಪತಿ ಆಯ್ಕೆ ಕುರಿತು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.





