ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಗುಪ್ತಚರ ಮಾಹಿತಿಯ ಆಧಾರದ ಮೇಲೆ ನಡೆಸಿದ ಕಾರ್ಯಾಚರಣೆಯಲ್ಲಿ ಉಮ್ಮರ್ ಫಾರೂಕ್ ಎಂ.ಆರ್. ಎಂಬ ಆರೋಪಿಯನ್ನು ಕೇರಳದ ಕೊಚ್ಚಿಯಲ್ಲಿ NIA ಅಧಿಕಾರಿಗಳು ಬಂಧಿಸಿದ್ದಾರೆ.
ಈ ಹಿಂದೆ ಉಮ್ಮರ್ ಫಾರೂಕ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹಾಗೂ ಜಾಮೀನು ರಹಿತ ವಾರಂಟ್ ಜಾರಿಯಾಗಿತ್ತು. ಅಲ್ಲದೆ, ಆರೋಪಿಯ ಬಂಧನಕ್ಕೆ ಸುಳಿವು ನೀಡುವವರಿಗೆ ₹4 ಲಕ್ಷ ಬಹುಮಾನ ನೀಡುವುದಾಗಿ NIA ಘೋಷಿಸಿತ್ತು.
ಆರೋಪಿಯನ್ನು ಬಂಧಿಸಿರುವ NIA, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದು, ಹತ್ಯೆ ಪ್ರಕರಣದ ಸಂಪೂರ್ಣ ಸಂಚು ಮತ್ತು ಇತರ ಆರೋಪಿಗಳ ಪಾತ್ರದ ಕುರಿತು ಮಾಹಿತಿ ಕಲೆಹಾಕುತ್ತಿದೆ.






