ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಚಿತಾಭಸ್ಮ ಪಡೆಯಲು ನಮಗೆ ಟೈಮಿಲ್ಲ- 5001 ರೂಪಾಯಿ ಕೊಟ್ಟು ಕೈತೊಳೆದುಕೊಂಡ ಮಗಳು : ಹೆತ್ತ ತಂದೆಯ ಅಂತ್ಯಕ್ರಿಯೆಯನ್ನು ವಿಡಿಯೋ ಕಾಲ್‌ನಲ್ಲಿ ವೀಕ್ಷಿಸಿದ ಕಟುಕ ಹೆಣ್ಣು ಮಕ್ಕಳು

Shwetha by Shwetha
August 7, 2026
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ಸೋನಿಪತ್: ಮನುಷ್ಯ ಸಂಬಂಧಗಳು ಎಷ್ಟು ಯಾಂತ್ರಿಕವಾಗಿವೆ ಎನ್ನುವುದಕ್ಕೆ ಹರ್ಯಾಣದ ಸೋನಿಪತ್‌ನಲ್ಲಿ ನಡೆದ ಈ ಕರುಣಾಜನಕ ಘಟನೆಯೇ ಸಾಕ್ಷಿ. ತಮ್ಮ ಇಡೀ ಜೀವನವನ್ನೇ ಮಕ್ಕಳ ಭವಿಷ್ಯಕ್ಕಾಗಿ ಮುಡಿಪಾಗಿಟ್ಟ ತಂದೆಯೊಬ್ಬರು ಕೊನೆಗೆ ಅನಾಥವಾಗಿ ಸಾವನ್ನಪ್ಪಿದ್ದಾರೆ. ವಿಶೇಷವೆಂದರೆ, ಮೂವರು ಸುಶಿಕ್ಷಿತ ಹೆಣ್ಣುಮಕ್ಕಳಿದ್ದರೂ ಸಹ ಒಬ್ಬರೂ ಅಂತ್ಯಕ್ರಿಯೆಗೆ ಬರದೆ ವಿಡಿಯೋ ಕಾಲ್ ಮೂಲಕ ಅಂತಿಮ ದರ್ಶನ ಪಡೆದು ಮಾನವೀಯತೆಯನ್ನೇ ಮರೆತಿದ್ದಾರೆ.

ಮೃತ ವ್ಯಕ್ತಿಯನ್ನು ಮೂಲತಃ ಮುಂಬೈನ ಬಟ್ಟೆ ವ್ಯಾಪಾರಿಯಾಗಿದ್ದ ಶಿವಚರಣ್‌ ರಾಮ್‌ ರತನ್‌ ಗುಪ್ತಾ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಇವರು ಹರ್ಯಾಣದ ಸೋನಿಪತ್‌ನ ವೃದ್ಧಾಶ್ರಮವೊಂದರಲ್ಲಿ ವಾಸವಿದ್ದರು. ಇವರ ಜೊತೆಗಿದ್ದ ಪತ್ನಿ ಮೀನಾ ಅವರು ಕೆಲ ತಿಂಗಳುಗಳ ಹಿಂದಷ್ಟೇ ನಿಧನರಾಗಿದ್ದರು. ಮಂಗಳವಾರ ತಡರಾತ್ರಿ ಶಿವಚರಣ್ ಅವರು ಅನಾರೋಗ್ಯದಿಂದ ವೃದ್ಧಾಶ್ರಮದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

Related posts

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

August 7, 2026
ಸಭಾಪತಿ ಸ್ಥಾನಕ್ಕೆ ರಾಜೀನಾಮೆಗೆ ಬಸವರಾಜ ಹೊರಟ್ಟಿ ಒಪ್ಪಿಗೆ

ಸಭಾಪತಿ ಸ್ಥಾನಕ್ಕೆ ರಾಜೀನಾಮೆಗೆ ಬಸವರಾಜ ಹೊರಟ್ಟಿ ಒಪ್ಪಿಗೆ

August 7, 2026

ಗುಪ್ತಾ ಅವರಿಗೆ ಮೂವರು ಹೆಣ್ಣುಮಕ್ಕಳಿದ್ದು, ಎಲ್ಲರಿಗೂ ಉತ್ತಮ ಶಿಕ್ಷಣ ನೀಡಿ ವಿವಾಹ ಮಾಡಿಕೊಟ್ಟಿದ್ದರು. ಇಬ್ಬರು ಪುತ್ರಿಯರು ಶಿಕ್ಷಕಿಯರಾಗಿ ಕೆಲಸ ಮಾಡುತ್ತಿದ್ದಾರೆ. ಒಬ್ಬಳು ನೇಪಾಳದಲ್ಲಿದ್ದರೆ, ಇನ್ನೊಬ್ಬಳು ಉತ್ತರ ಪ್ರದೇಶದಲ್ಲಿ ಹಾಗೂ ಮತ್ತೊಬ್ಬಳು ಮುಂಬೈನಲ್ಲಿ ನೆಲೆಸಿದ್ದಾರೆ. ಗುಪ್ತಾ ಅವರ ಆರೋಗ್ಯ ಕ್ಷೀಣಿಸುತ್ತಿರುವ ಬಗ್ಗೆ 20 ದಿನಗಳ ಮೊದಲೇ ವೃದ್ಧಾಶ್ರಮದ ಆಡಳಿತ ಮಂಡಳಿ ಮಕ್ಕಳಿಗೆ ಮಾಹಿತಿ ನೀಡಿತ್ತು. ಆದರೂ ಯಾವೊಬ್ಬ ಮಗಳೂ ತಂದೆಯನ್ನು ನೋಡಲು ಬರಲಿಲ್ಲ.

ಸಾವಿನ ಸುದ್ದಿ ತಿಳಿದ ಮೇಲೂ ಮಕ್ಕಳು ವೃದ್ಧಾಶ್ರಮಕ್ಕೆ ಬರಲು ಸಿದ್ಧರಿರಲಿಲ್ಲ. ಬದಲಿಗೆ ವಿಡಿಯೋ ಕಾಲ್ ಮಾಡುವಂತೆ ತಿಳಿಸಿ, ಮೊಬೈಲ್ ಪರದೆಯ ಮೂಲಕವೇ ತಂದೆಯ ಅಂತಿಮ ವಿಧಿವಿಧಾನಗಳನ್ನು ವೀಕ್ಷಿಸಿದ್ದಾರೆ. ವೃದ್ಧಾಶ್ರಮದ ಆಡಳಿತಾಧಿಕಾರಿ ಆನಂದ್ ಕುಮಾರ್ ಅವರು ಸ್ಥಳೀಯರ ನೆರವಿನಿಂದ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಅಮಾನವೀಯತೆಯ ಪರಮಾವಧಿ ಎಂದರೆ, ಅಂತ್ಯಕ್ರಿಯೆಯ ನಂತರ ತಂದೆಯ ಚಿತಾಭಸ್ಮವನ್ನಾದರೂ ತೆಗೆದುಕೊಂಡು ಹೋಗಿ ಎಂದರೆ, ನಮಗೆ ಅಲ್ಲಿಗೆ ಬರಲು ಸಮಯವಿಲ್ಲ ಎಂದು ಮಕ್ಕಳು ಉತ್ತರಿಸಿದ್ದಾರೆ. ನೀವೇ ಗಂಗಾ ನದಿಯಲ್ಲಿ ವಿಸರ್ಜಿಸಿ ಎಂದು ಹೇಳಿದ್ದಾರೆ. ನೇಪಾಳದಲ್ಲಿರುವ ಶಿಕ್ಷಕಿ ಮಗಳು ಅಂತ್ಯಕ್ರಿಯೆಯ ಖರ್ಚಿಗಾಗಿ ಆನ್‌ಲೈನ್ ಮೂಲಕ 5001 ರೂಪಾಯಿ ಕಳುಹಿಸಿ ತನ್ನ ಜವಾಬ್ದಾರಿ ಮುಗಿದಿದೆ ಎಂದು ಕೈತೊಳೆದುಕೊಂಡಿದ್ದಾಳೆ.

ಮಕ್ಕಳ ಈ ನಡೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಲಿಸಿದ ವಿದ್ಯೆ ಮತ್ತು ಪಡೆದ ಶಿಕ್ಷಣ ಇಂತಹ ಕಟುಕತನವನ್ನು ಕಲಿಸಿತೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ShareTweetSendShare
Join us on:

Related Posts

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

by Shwetha
August 7, 2026
0

ಭಾರತವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವು ಈ ದೇಶಕ್ಕೆ ಬಹುದೊಡ್ಡ ಅಪಾಯ ತಂದೊಡ್ಡಲಿದೆ. ಇದು ಕೇವಲ ಧಾರ್ಮಿಕ ಬದಲಾವಣೆಯಲ್ಲ, ಬದಲಾಗಿ ಶೋಷಣೆಯ ಹಳೆಯ ವ್ಯವಸ್ಥೆಯನ್ನು ಮರಳಿ ತರುವ...

ಸಭಾಪತಿ ಸ್ಥಾನಕ್ಕೆ ರಾಜೀನಾಮೆಗೆ ಬಸವರಾಜ ಹೊರಟ್ಟಿ ಒಪ್ಪಿಗೆ

ಸಭಾಪತಿ ಸ್ಥಾನಕ್ಕೆ ರಾಜೀನಾಮೆಗೆ ಬಸವರಾಜ ಹೊರಟ್ಟಿ ಒಪ್ಪಿಗೆ

by Shwetha
August 7, 2026
0

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಒಪ್ಪಿರುವುದಾಗಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 7, 2026
0

ದಿನ ಭವಿಷ್ಯ: 07-08-2026 1. ಮೇಷ ರಾಶಿ ಉದ್ಯೋಗ ಮತ್ತು ಆರ್ಥಿಕತೆ: ಕೆಲಸದ ಸ್ಥಳದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಪ್ರಶಂಸೆ ಸಿಗಲಿದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳಿಗೆ ಇದು...

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram