ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

Shwetha by Shwetha
August 11, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬಿರುಗಾಳಿ ಎದ್ದಿದೆ. ಮುಖ್ಯವಾಗಿ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲದಿರುವುದು ಸರ್ಕಾರದ ವರ್ಚಸ್ಸಿಗೆ ಧಕ್ಕೆ ತಂದಿದೆ. ವಿರೋಧ ಪಕ್ಷಗಳ ಟೀಕೆ ಮತ್ತು ಹೈಕಮಾಂಡ್ ಮುಜುಗರವನ್ನು ತಪ್ಪಿಸಲು ಡಿಕೆ ನೇತೃತ್ವದ ಸರ್ಕಾರದಲ್ಲಿ ಈಗ ಮಹತ್ವದ ಬದಲಾವಣೆಗಳು ನಡೆಯುವ ಸೂಚನೆ ಸಿಕ್ಕಿದೆ. ಈ ಬಿಕ್ಕಟ್ಟು ಶಮನಗೊಳಿಸಲು ಹಾಲಿ ಇರುವ ಮೂವರು ಸಚಿವರು ತಮ್ಮ ಸ್ಥಾನವನ್ನು ತ್ಯಾಗ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಒಕ್ಕಲಿಗ ಅಸಮಾಧಾನ ತಣಿಸಲು ಬಾಲಕೃಷ್ಣ ತ್ಯಾಗ

Related posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026
ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

August 13, 2026

ಹಿರಿಯ ನಾಯಕ ಎಂ. ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದು ಒಕ್ಕಲಿಗ ಸಮುದಾಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೃಷ್ಣಪ್ಪ ಅವರ ಪಟ್ಟು ಸಡಿಲಿಸಲು ಹೈಕಮಾಂಡ್ ಹಾಕಿದ ಫಾರ್ಮುಲಾದಂತೆ, ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ತಮ್ಮ ಸ್ಥಾನ ಬಿಟ್ಟುಕೊಡಲು ಮುಂದಾಗಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಅವರ ಆಪ್ತರಾಗಿರುವ ಬಾಲಕೃಷ್ಣ, ಪಕ್ಷದ ಹಿತದೃಷ್ಟಿಯಿಂದ ಯಾರೇ ಆದರೂ ತ್ಯಾಗಕ್ಕೆ ಸಿದ್ಧವಿರಬೇಕು ಎಂದು ಹೇಳುವ ಮೂಲಕ ತಮ್ಮ ನಿರ್ಗಮನದ ಮುನ್ಸೂಚನೆ ನೀಡಿದ್ದಾರೆ. ಇದರಿಂದ ಎಂ. ಕೃಷ್ಣಪ್ಪ ಅವರಿಗೆ ಸಚಿವ ಸಂಪುಟ ಸೇರಲು ಹಾದಿ ಸುಗಮವಾಗುವ ಸಾಧ್ಯತೆಯಿದೆ.

ಮಗಳಿಗಾಗಿ ಮುನಿಯಪ್ಪ ರಾಜೀನಾಮೆ

ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ನೀಡಲೇಬೇಕಾದ ಅನಿವಾರ್ಯತೆ ಸರ್ಕಾರಕ್ಕೆ ಎದುರಾಗಿದೆ. ಈ ಸಮಸ್ಯೆಗೆ ಪರಿಹಾರವಾಗಿ ಹಿರಿಯ ಸಚಿವ ಕೆ. ಹೆಚ್. ಮುನಿಯಪ್ಪ ಅವರು ತಮ್ಮ ಸ್ಥಾನವನ್ನು ಮಗಳು ಮತ್ತು ಕೆಜಿಎಫ್ ಶಾಸಕಿ ಎಂ. ರೂಪಕಲಾ ಅವರಿಗಾಗಿ ಬಿಟ್ಟುಕೊಡಲಿದ್ದಾರೆ ಎಂಬ ಚರ್ಚೆ ದಟ್ಟವಾಗಿದೆ. ಒಂದೇ ಕುಟುಂಬಕ್ಕೆ ಎರಡು ಪ್ರಮುಖ ಹುದ್ದೆ ಬೇಡ ಎಂಬ ಕಾರಣಕ್ಕೆ ರೂಪಕಲಾಗೆ ಈ ಹಿಂದೆ ಸ್ಥಾನ ತಪ್ಪಿತ್ತು. ಈಗ ತಂದೆಯೇ ಸ್ಥಾನ ತ್ಯಾಗ ಮಾಡಿದರೆ, ಮಹಿಳಾ ಕೋಟಾದಡಿ ರೂಪಕಲಾ ಸಂಪುಟ ಸೇರುವುದು ಬಹುತೇಕ ನಿಶ್ಚಿತವಾಗಿದೆ.

ನಾಗೇಂದ್ರಗೆ ಕೊಕ್ ಶಿವಣ್ಣನವರ್‌ಗೆ ಅದೃಷ್ಟ

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ಆರೋಪ ಹೊತ್ತಿರುವ ಬಿ. ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಲು ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ. ಹಗರಣದಿಂದ ಸರ್ಕಾರಕ್ಕೆ ಆಗುತ್ತಿರುವ ಮುಜುಗರ ತಪ್ಪಿಸಲು ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯುವುದು ಅನಿವಾರ್ಯವಾಗಿದೆ. ಒಂದು ವೇಳೆ ನಾಗೇಂದ್ರ ನಿರ್ಗಮಿಸಿದರೆ, ಕುರುಬ ಸಮುದಾಯದ ಪ್ರಬಲ ನಾಯಕ ಬಸವರಾಜ ಶಿವಣ್ಣನವರ್ ಅವರಿಗೆ ಮಂತ್ರಿ ಭಾಗ್ಯ ಒಲಿಯಲಿದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಜಾತಿ ಸಮೀಕರಣವನ್ನೂ ಸರಿದೂಗಿಸಲು ಕಾಂಗ್ರೆಸ್ ಮುಂದಾಗಿದೆ.

ShareTweetSendShare
Join us on:

Related Posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

by Shwetha
August 13, 2026
0

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram