2027ರ ವೇಳೆಗೆ ಎತ್ತಿನಹೊಳೆ ಯೋಜನೆಯ ನೀರು ಕೋಲಾರ ಜಿಲ್ಲೆಗೆ ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ಯೋಜನೆ ಜಾರಿಗೆ ಬಂದೇ ಬರುತ್ತದೆ. ಮುಂದಿನ ವರ್ಷದಿಂದ ಜಿಲ್ಲೆಯಲ್ಲಿ ಎತ್ತಿನಹೊಳೆ ನೀರು ಹರಿಯಲಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಕಾವೇರಿ ನದಿ ನೀರು ಹಂಚಿಕೆ, ಮೇಕೆದಾಟು ಹಾಗೂ ಮಹದಾಯಿ ನೀರಿನ ವಿಚಾರಗಳಲ್ಲಿ ನೆರೆಯ ರಾಜ್ಯಗಳೊಂದಿಗೆ ಮಾತುಕತೆ ನಡೆಸುವುದು ಉತ್ತಮ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.
ಅಕ್ಕಪಕ್ಕದ ರಾಜ್ಯಗಳ ಪ್ರತಿನಿಧಿಗಳು ಪರಸ್ಪರ ಕುಳಿತು ಚರ್ಚೆ ನಡೆಸಿದರೆ ನೀರಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.







