ಬೆಂಗಳೂರು: ಒಂದು ವಾರದ ಲಾಕ್‍ಡೌನ್ ಮುಗಿಯಲು ಇನ್ನು ಮೂರು ದಿನಗಳು ಬಾಕಿ ಇರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಲಾಕ್‍ಡೌನ್‍ಗೆ ಜನರು ಕ್ಯಾರೇ ಎನ್ನುತ್ತಿಲ್ಲ.
ನಗರದ ಮಡಿವಾಳ ಮಾರುಕಟ್ಟೆ, ಬಸವನಗುಡಿ, ಕೆ.ಆರ್ ಮಾರುಕಟ್ಟೆ, ಯಶವಂತಪುರ, ಮಲ್ಲೇಶ್ವರಂ ಸೇರಿದಂತೆ ಹಲವು ಮಾರುಕಟ್ಟೆಗಳಲ್ಲಿ ಜನರು ಸಾಮಾಜಿಕ ಅಂತರವನ್ನು ಮರೆತು ಖರೀದಿಯಲ್ಲಿ ಬ್ಯುಸಿಯಾಗಿದ್ದಾರೆ.
ಬೆಂಗಳೂರು ನಗರ, ಗ್ರಾಮಾಂತರ, ದಕ್ಷಿಣ ಕನ್ನಡ, ಧಾರವಾಡ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಒಂದು ವಾರ ಲಾಕ್‍ಡೌನ್ ಇದೆ. ಆದರೆ, ಉಳಿದ ಜಿಲ್ಲೆಗಳಲ್ಲಿ ಇಂದು ಸಂಡೇ ಲಾಕ್‍ಡೌನ್ ಇದೆ. ಆದರೂ ಕೂಡ ಸಂಡೇ ಲಾಕ್‍ಡೌನ್‍ಗೆ ಹಲವು ಜಿಲ್ಲೆಗಳಲ್ಲಿ ಜನರು ತಲೆ ಕೆಡಿಸಿಕೊಂಡಿಲ್ಲ. ಎಲ್ಲಾ ಮಾರುಕಟ್ಟೆಗಳಲ್ಲಿ ಜನಜಂಗುಳಿ ಸಾಮಾನ್ಯವಾಗಿದೆ.
ಬೆಂಗಳೂರು ನಗರದ ಚಿಕನ್ ಹಾಗೂ ಮಾಂಸದ ಅಂಗಡಿಗಳ ಮುಂದೆ ಜನರು ಕ್ಯೂ ನಿಂತಿದ್ದಾರೆ. ಸಂಡೇ ಲಾಕ್‍ಡೌನ್ ಇರಲಿ, ಬಿಡಲಿ, ನಗರದ ಬ್ಯಾಟರಾಯನಪುರದಲ್ಲಿರುವ ಪಾಪಣ್ಣ ಮಾಂಸದ ಅಂಗಡಿ ಮುಂದೆ ಪ್ರತಿ ಭಾನುವಾರ ಕಿ.ಮೀಗಟ್ಟಲೆ ಸರದಿ ಸಾಲಿನಲ್ಲಿ ನಿಂತು ಮಾಂಸ ಖರೀದಿಸುವುದು ಸಾಮಾನ್ಯವಾಗಿದೆ.
ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕು ಸಮುದಾಯದ ಹಂತದಲ್ಲಿ ಹರಡಿದೆ. ಮುಂದಿನ ದಿನಗಳಲ್ಲಿ ಕೊರೊನಾ ಅಬ್ಬರ ಮತ್ತಷ್ಟು ಹೆಚ್ಚಲಿದೆ. ಕಳೆದ ನಾಲ್ಕು ವಾರಗಳಲ್ಲಿ ಸೋಂಕಿನ ಪ್ರಮಾಣ ಶೇ.12ಕ್ಕಿಂತ ಹೆಚ್ಚಿದೆ. ಸಾವಿನ ಸಂಖ್ಯೆಯಲ್ಲಿ ಕೂಡ ಬೆಂಗಳೂರಿನಲ್ಲಿ ಶೇ8ರಷ್ಟು ಏರಿಕೆಯಾಗಿದೆ. ನಮ್ಮ ಕಣ್ಣ ಮುಂದೆಯೇ ಕೊರೊನಾ ಆರ್ಭಟದ ದೃಶ್ಯ ಇದ್ದರೂ ಜನ ಲಾಕ್‍ಡೌನ್‍ಗೆ ಜನರು ತಲೆ ಕೆಡಿಸಿಕೊಳ್ಳದಿರುವುದು ವಿಪರ್ಯಾಸವೇ ಸರಿ.
2027ರ ಎಸ್ಎಸ್ಎಲ್ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2027ರ ಎಸ್ಎಸ್ಎಲ್ಸಿ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಿದೆ. ರಾಜ್ಯದ ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಹಾಗೂ...








