ವಾಲ್ಮೀಕಿ ಸಮುದಾಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಅವರ ಧರ್ಮಪತ್ನಿ ನೀಡಿರುವ ಹೇಳಿಕೆಯನ್ನೂ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಹೇಳಿದ್ದಾರೆ.
ಚಂದ್ರಶೇಖರ್ ಅವರು ಅಧೀಕ್ಷಕರ ಹುದ್ದೆಯಲ್ಲಿದ್ದರೂ, ಅವರ ಕುಟುಂಬಕ್ಕೆ ಇಂದಿಗೂ ಗ್ರಾಚ್ಯುಟಿ ಹಾಗೂ ಪಿಂಚಣಿ ಸಿಕ್ಕಿಲ್ಲ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ಅಲ್ಲದೆ, ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯ ಮಗನಿಗೆ ಜವಾನನ ಹುದ್ದೆ ನೀಡುವ ಮೂಲಕ ರಾಜ್ಯ ಸರ್ಕಾರ ಆ ಕುಟುಂಬಕ್ಕೆ ಅವಮಾನ ಮಾಡಿದೆ ಎಂದು ಅವರು ಟೀಕಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ವಾಲ್ಮೀಕಿ ಸಮುದಾಯದ ಬಗ್ಗೆ ಗೌರವವಿದ್ದರೆ ಬಿ. ನಾಗೇಂದ್ರ ಅವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.








