ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

Shwetha by Shwetha
August 16, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆರ್‌ಎಸ್‌ಎಸ್ ನಾಯಕರ ನಡೆಯನ್ನು ‘ಭಂಡತನ’ ಎಂದು ಕರೆದಿರುವ ಸಚಿವ ವಿಜಯಾನಂದ ಕಾಶಪ್ಪನವರು, ಕಳ್ಳ ದುಡ್ಡನ್ನು ಬಚ್ಚಿಟ್ಟುಕೊಳ್ಳಲು ಸಂಘಟನೆಯನ್ನು ನೋಂದಣಿ ಮಾಡಿಸುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕಳ್ಳ ದುಡ್ಡಿನ ರಕ್ಷಣೆಗೆ ನೋಂದಣಿ ನಿರಾಕರಣೆ

Related posts

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026
ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

August 16, 2026

ಬಾಗಲಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಆರೆಸ್ಸೆಸ್‌ಗೆ ಅಪಾರ ಪ್ರಮಾಣದ ಕಳ್ಳ ದುಡ್ಡು ಬರುತ್ತಿದೆ. ಒಂದೊಮ್ಮೆ ಸಂಘಟನೆಯನ್ನು ಅಧಿಕೃತವಾಗಿ ನೋಂದಣಿ ಮಾಡಿಸಿದರೆ, ಈ ಅಕ್ರಮ ಹಣ ಎಲ್ಲಿಂದ ಬರುತ್ತದೆ ಎಂಬ ಸತ್ಯ ಸರ್ಕಾರಕ್ಕೆ ಗೊತ್ತಾಗುತ್ತದೆ. ಈ ಕಪ್ಪು ಹಣವನ್ನು ರಕ್ಷಣೆ ಮಾಡಿಕೊಳ್ಳುವ ಒಂದೇ ಒಂದು ಉದ್ದೇಶದಿಂದಲೇ ಅವರು ನೋಂದಣಿ ಮಾಡಿಸುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಕಟುವಾಗಿ ವಾಗ್ದಾಳಿ ನಡೆಸಿದರು.

ಸಂವಿಧಾನ ಮತ್ತು ಕಾನೂನಿನ ಅರಿವೇ ಇಲ್ಲ

ಆರ್‌ಎಸ್‌ಎಸ್‌ನವರಿಗೆ ದೇಶದ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಕನಿಷ್ಠ ಗೌರವ ಹಾಗೂ ಅರಿವು ಇದೆಯಾ ಎಂದು ಪ್ರಶ್ನಿಸಿದ ಕಾಶಪ್ಪನವರ್, ನಾವು ಸಂವಿಧಾನದ ಅಡಿಯಲ್ಲಿ ಇರುವ ಪ್ರಜೆಗಳು ಎಂದು ಹೇಳಿಕೊಳ್ಳುವ ಇವರು ಸಂವಿಧಾನದ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಅದಕ್ಕೇ ಇವರನ್ನು ಭಂಡರು ಎನ್ನುವುದು. ಇವರಿಗೆ ಸಂವಿಧಾನವೂ ಬೇಕಾಗಿಲ್ಲ, ಕಾನೂನೂ ಬೇಕಾಗಿಲ್ಲ. ಯಾವುದೇ ಸಂಘಟನೆ ಇರಲಿ, ಅದಕ್ಕೊಂದು ಹೆಸರಿರಬೇಕು ಮತ್ತು ಸರ್ಕಾರದ ಬಳಿ ನೋಂದಣಿ ಇರಬೇಕು. ಅಂದಾಗ ಮಾತ್ರ ಅದು ಅಧಿಕೃತ ಎನಿಸಿಕೊಳ್ಳುತ್ತದೆ. ನಮ್ಮ ಗೃಹ ಸಚಿವರು ಸಂಘಟನೆಗಳ ಕಡ್ಡಾಯ ನೋಂದಣಿಗೆ ಕಾನೂನು ತರಲು ಹೊರಟಿದ್ದಾರೆ ಎಂದು ಸ್ಪಷ್ಟಪಡಿಸಿದರು.

12 ವರ್ಷದಲ್ಲಿ ಬಿಜೆಪಿಗೆ ಅಷ್ಟೊಂದು ಹಣ ಬಂದಿದ್ದಾದರೂ ಎಲ್ಲಿಂದ?

ಆರ್‌ಎಸ್‌ಎಸ್ ಮತ್ತು ಬಿಜೆಪಿಗೆ ಬರುವ ಹಣದ ಮೂಲವನ್ನು ಪ್ರಶ್ನಿಸಿದ ಸಚಿವರು, ಕಾಂಗ್ರೆಸ್ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷ, 70 ವರ್ಷ ಆಡಳಿತ ನಡೆಸಿದೆ. ಆದರೆ ಕೇವಲ 12 ವರ್ಷಗಳಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿಗೆ ಅಷ್ಟೊಂದು ಅಪಾರ ಪ್ರಮಾಣದ ದುಡ್ಡು ಎಲ್ಲಿಂದ ಬಂತು? ಎಂಬುದನ್ನು ಅವರು ಸಾರ್ವಜನಿಕವಾಗಿ ತೋರಿಸಲಿ, ಲೆಕ್ಕ ಕೊಡಲಿ ಎಂದು ಸವಾಲೆಸೆದರು. ಕೈಯಲ್ಲಿ ಬಡಿಗೆ ಹಿಡಿದುಕೊಂಡು ನೀಡುವ ತರಬೇತಿ ದೇಶದ ರಕ್ಷಣೆಗಾ? ಸ್ವಾತಂತ್ರ್ಯ ಚಳವಳಿಯ ವೇಳೆಯೂ ಇವರು ದೇಶದ ವಿರುದ್ಧವಾಗಿ ನಡೆದುಕೊಂಡಿದ್ದರು. ಇವತ್ತಿಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಗೌರವ ಕೊಡುತ್ತಿಲ್ಲ ಎಂದು ಕಿಡಿಕಾರಿದರು.

ಆರೆಸ್ಸೆಸ್ ವಿರುದ್ಧ ಕ್ರಮಕ್ಕೆ ಕಾಲ ಬರಲಿದೆ

ಧೈರ್ಯವಿದ್ದರೆ ಆರೆಸ್ಸೆಸ್ ವಿರುದ್ಧ ಕ್ರಮ ಕೈಗೊಳ್ಳಿ ಎಂಬ ಬಿಜೆಪಿ ನಾಯಕರ ಸವಾಲಿಗೆ ಉತ್ತರಿಸಿದ ಕಾಶಪ್ಪನವರ್, ಪ್ರತಿಯೊಂದಕ್ಕೂ ಸೂಕ್ತ ಕಾಲ ಬರಲಿದೆ. ತಕ್ಷಣವೇ ಎಲ್ಲವೂ ಆಗುವುದಿಲ್ಲ. ಮೊದಲು ಸರಿಯಾದ ಕಾನೂನು ರೂಪಿಸಲಾಗುತ್ತದೆ, ಆ ಬಳಿಕ ಖಂಡಿತವಾಗಿಯೂ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು. ನಮ್ಮ ಸರ್ಕಾರ ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ತತ್ವದಂತೆ ಎಲ್ಲರನ್ನೂ ಅಪ್ಪಿಕೊಳ್ಳುವ ಕೆಲಸ ಮಾಡುತ್ತದೆ. ಆದರೆ ಆರ್‌ಎಸ್‌ಎಸ್ ಬೆದರಿಕೆ ಹಾಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ShareTweetSendShare
Join us on:

Related Posts

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

‘ಆರ್‌ಎಸ್‌ಎಸ್‌ ಇದುವರೆಗೆ ನೋಂದಣಿಯಾಗಿಲ್ಲ, ಮುಂದೆಯೂ ಮಾಡಲ್ಲ’: ‘ನೋಂದಣಿ ಮಾಡಿಕೊಂಡ ಸಂಸ್ಥೆಗಳು ಏನ್ ಮಾಡ್ತಿವೆ ಗೊತ್ತಿದೆ’- ಕಾಂಗ್ರೆಸ್ ಸರ್ಕಾರಕ್ಕೆ ಬಿ.ಎಲ್. ಸಂತೋಷ್‌ ಟಾಂಗ್

‘ಆರ್‌ಎಸ್‌ಎಸ್‌ ಇದುವರೆಗೆ ನೋಂದಣಿಯಾಗಿಲ್ಲ, ಮುಂದೆಯೂ ಮಾಡಲ್ಲ’: ‘ನೋಂದಣಿ ಮಾಡಿಕೊಂಡ ಸಂಸ್ಥೆಗಳು ಏನ್ ಮಾಡ್ತಿವೆ ಗೊತ್ತಿದೆ’- ಕಾಂಗ್ರೆಸ್ ಸರ್ಕಾರಕ್ಕೆ ಬಿ.ಎಲ್. ಸಂತೋಷ್‌ ಟಾಂಗ್

by Shwetha
August 16, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಆರ್‌ಎಸ್‌ಎಸ್ ನಡುವೆ ಸೃಷ್ಟಿಯಾಗಿರುವ ರಾಜಕೀಯ ಸಂಘರ್ಷ ಈಗ ಮತ್ತಷ್ಟು ತೀವ್ರಗೊಂಡಿದೆ. ಆರ್‌ಎಸ್‌ಎಸ್‌...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram