ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ ಆಡಳಿತ ಹಾಗೂ ಕಾನೂನು ಸುವ್ಯವಸ್ಥೆಯ ವಿಚಾರದಲ್ಲಿ ಮತ್ತೊಂದು ರಾಜ್ಯ ಮಧ್ಯಪ್ರವೇಶ ಮಾಡಬಾರದು ಎಂದು ಹೇಳಿದ್ದಾರೆ.
ಯಾವುದೇ ರಾಜ್ಯ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ನಾನು ತಮಿಳುನಾಡಿನ ವಿಚಾರದಲ್ಲಿ ತಲೆ ಹಾಕಿಲ್ಲ. ನಮ್ಮ ರಾಜ್ಯವನ್ನು ಹೇಗೆ ರಕ್ಷಣೆ ಮಾಡಬೇಕು ಎಂಬುದು ನಮಗೆ ಗೊತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.
ಹನೂರು ಶೂಟೌಟ್ ಪ್ರಕರಣದ ಬಗ್ಗೆ ತಮಿಳುನಾಡು ನಾಯಕರು ಪ್ರತಿಕ್ರಿಯಿಸಿರುವುದಕ್ಕೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ ಡಿಕೆಶಿ, ಅಲ್ಲಿನ ನಾಯಕರು ಅವರ ಕೆಲಸ ಮಾಡಲಿ, ನಮ್ಮ ಕೆಲಸ ನಾವು ಮಾಡುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯಗಳ ನಡುವಿನ ಸಂಬಂಧದಲ್ಲಿ ಪರಸ್ಪರ ಗೌರವ ಇರಬೇಕು. ತಮ್ಮ ರಾಜ್ಯದ ಆಡಳಿತ ಹಾಗೂ ಕಾನೂನು ಸುವ್ಯವಸ್ಥೆಯ ವಿಚಾರಗಳನ್ನು ಆಯಾ ರಾಜ್ಯ ಸರ್ಕಾರಗಳೇ ನಿರ್ವಹಿಸಬೇಕು ಎಂಬ ಸಂದೇಶವನ್ನು ಡಿಕೆಶಿ ನೀಡಿದ್ದಾರೆ.








