ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ನನ್ನನ್ನು ದಲಿತ ಎನ್ನುವ ಕಾರಣಕ್ಕೇ ಟಾರ್ಗೆಟ್ ಮಾಡುತ್ತಿದ್ದಾರೆ: ಸಾಯುವವರೆಗೂ ದಲಿತನಾಗಿಯೇ ಇರುತ್ತೇನೆ, ರಾಜೀನಾಮೆ ಪಟ್ಟಿಗೆ ಸಂವಿಧಾನ ಹಿಡಿದು ನಾಗೇಂದ್ರ ತಿರುಗೇಟು

Shwetha by Shwetha
August 20, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ರಾಜೀನಾಮೆಗೆ ಪಟ್ಟು ಹಿಡಿದಿರುವ ವಿಪಕ್ಷಗಳ ವಿರುದ್ಧ ಸಚಿವ ಬಿ ನಾಗೇಂದ್ರ ಭಾರಿ ವಾಗ್ದಾಳಿ ನಡೆಸಿದ್ದಾರೆ. ಮೂರು ದಿನಗಳ ಮೌನ ಮುರಿದು ವಿಧಾನಸೌಧದಲ್ಲಿ ದಾಖಲೆಗಳ ಸಮೇತ ಸುದ್ದಿಗೋಷ್ಠಿ ನಡೆಸಿದ ಸಚಿವರು, ತಮಗೆ ರಾಜ್ಯದ ಮತ್ತು ತಮ್ಮ ಸಮುದಾಯದ ಜನರಿಗೆ ಸತ್ಯ ತಿಳಿಸುವ ಹೊಣೆಗಾರಿಕೆ ಇದೆ ಎಂದು ಹೇಳಿ ವಿಪಕ್ಷಗಳ ಆರೋಪಗಳನ್ನು ತೀವ್ರವಾಗಿ ಖಂಡಿಸಿದರು. ದಲಿತ ನಾಯಕ ಮಂತ್ರಿಯಾಗಿದ್ದನ್ನು ಸಹಿಸದ ಮನುವಾದಿಗಳು ತಮ್ಮನ್ನು ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಸಚಿವರು ಆಕ್ರೋಶ ಹೊರಹಾಕಿದ್ದಾರೆ.

ನನ್ನ ಖಾತೆಗೆ ಒಂದೇ ಒಂದು ರೂಪಾಯಿ ಬಂದಿಲ್ಲ

Related posts

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

August 20, 2026
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ರೋಗಕ್ಕೆ ತಕ್ಕ ಪೌಷ್ಟಿಕ ಆಹಾರ; 4 ಮಾದರಿಯ ಮೆನು ಸಿದ್ಧತೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ರೋಗಕ್ಕೆ ತಕ್ಕ ಪೌಷ್ಟಿಕ ಆಹಾರ; 4 ಮಾದರಿಯ ಮೆನು ಸಿದ್ಧತೆ

August 20, 2026

ಪ್ರಕರಣದ ವಿವರಗಳನ್ನು ಬಿಚ್ಚಿಟ್ಟ ಸಚಿವ ನಾಗೇಂದ್ರ, ವಾಲ್ಮೀಕಿ ನಿಗಮದಿಂದ ಒಂದು ಬ್ಯಾಂಕ್‌ಗೆ 187 ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿದ್ದು ನನ್ನ ಅಥವಾ ಅಧ್ಯಕ್ಷರ ಗಮನಕ್ಕೆ ಬಂದಿರಲಿಲ್ಲ. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತನಾಗಿ 100 ಕೋಟಿ ರೂಪಾಯಿ ಹಣವನ್ನು ಫ್ರೀಜ್ ಮಾಡಿಸಿದೆ. ತೆಲಂಗಾಣ ಮೂಲದ ಸುಮಾರು 800 ಖಾತೆಗಳಿಗೆ ಈ ಹಣ ವರ್ಗಾವಣೆಯಾಗಿತ್ತು. ತನಿಖೆಗೆ ಯಾವುದೇ ಅಡ್ಡಿಯಾಗಬಾರದು ಎನ್ನುವ ಕಾರಣಕ್ಕೆ ನಾನೇ ಸ್ವಯಂಪ್ರೇರಿತನಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಎಸ್‌ಐಟಿ ತನಿಖೆ ನಡೆಸಿ ಈಗಾಗಲೇ 79 ಕೋಟಿ ರೂಪಾಯಿ ಹಣವನ್ನು ವಾಪಸ್ ತಂದಿದೆ. ಎಸ್‌ಐಟಿ ತನಿಖೆಯಲ್ಲಿ ನನ್ನ ಖಾತೆಗೆ ಒಂದೇ ಒಂದು ರೂಪಾಯಿ ಕೂಡ ಬಂದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ವಿವರಿಸಿದರು.

ಸಾಯುವವರೆಗೂ ದಲಿತನಾಗಿಯೇ ಇರುತ್ತೇನೆ: ಸಂವಿಧಾನ ಪ್ರದರ್ಶನ

ತಮ್ಮ ಮಾತುಗಳ ಮಧ್ಯೆ ಭಾರತೀಯ ಸಂವಿಧಾನದ ಪುಸ್ತಕವನ್ನು ಪ್ರದರ್ಶಿಸಿದ ಸಚಿವರು, ದಲಿತನೊಬ್ಬ ಮಂತ್ರಿಯಾಗಿರುವುದನ್ನು ಸಹಿಸದೇ ಈ ಮನುವಾದಿಗಳು ಕೆಳಗಿಳಿಸಲು ಕುತಂತ್ರ ಮಾಡುತ್ತಿದ್ದಾರೆ. ದಲಿತರನ್ನು ಈ ದೇಶದಲ್ಲಿ ಮನುವಾದಿಗಳು ಹೇಗೆ ನಡೆಸಿಕೊಳ್ಳುತ್ತಿದ್ದಾರೆ ಎನ್ನುವುದಕ್ಕೆ ನನ್ನ ಮೇಲಿನ ಆರೋಪವೇ ಉದಾಹರಣೆ. ಈ ಕೇಸ್‌ನಲ್ಲಿ ಏನಿದೆ ಎಂದು ನಾನು ರಾಜೀನಾಮೆ ಕೊಡಬೇಕು. ನಾನು ಹುಟ್ಟಿನಿಂದಲೂ ದಲಿತ, ಸಾಯುವವರೆಗೂ ದಲಿತನಾಗಿಯೇ ಇರುತ್ತೇನೆ. ನಮ್ಮನ್ನು ಈ ದೇಶದ ಸಂವಿಧಾನವೇ ಕಾಪಾಡುತ್ತಿದೆ ಎಂದರು.

ಬಿಜೆಪಿಯ 126 ಮಂತ್ರಿಗಳ ಮೇಲೆ ಗಂಭೀರ ಕೇಸ್ ಇದೆ

ತಮ್ಮ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿಗೆ ತಿರುಗೇಟು ನೀಡಿದ ನಾಗೇಂದ್ರ, ದೇಶದಲ್ಲಿ ಕೇಂದ್ರ ಸಚಿವರು ಸೇರಿದಂತೆ ಬಿಜೆಪಿಯ 326 ಮಂತ್ರಿಗಳಿದ್ದಾರೆ. ಅವರಲ್ಲಿ 126 ಮಂತ್ರಿಗಳ ಮೇಲೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಿವೆ. ಪಶ್ಚಿಮ ಬಂಗಾಳದ ಸುವೇಂದು ಅಧಿಕಾರಿ ಮೇಲೆಯೇ 20 ಕೇಸ್‌ಗಳಿವೆ. ಅವರಿಂದ ರಾಜೀನಾಮೆ ಪಡೆಯದ ಬಿಜೆಪಿಯವರು ನನ್ನ ರಾಜೀನಾಮೆ ಕೇಳುತ್ತಿರುವುದು ಏಕೆ? ಮೊದಲು ಸುವೇಂದು ಅಧಿಕಾರಿ ರಾಜೀನಾಮೆ ಪಡೆಯಿರಿ. ನಾನು ಜಾಮೀನಿನ ಮೇಲೆ ಹೊರಗಿದ್ದೇನೆ ನಿಜ, ಆದರೆ ಅಪರಾಧಿಯಲ್ಲ. ನಾನು ತಪ್ಪು ಮಾಡಿದ್ದರೆ ನ್ಯಾಯಾಲಯ ನೀಡುವ ತೀರ್ಪಿಗೆ ತಲೆಬಾಗುತ್ತೇನೆ. ನಾನು ಅಪರಾಧಿಯಾಗಿದ್ದರೆ ರಾಜ್ಯಪಾಲರು ನನಗೆ ಪ್ರಮಾಣ ವಚನ ಬೋಧಿಸಲು ಅವಕಾಶ ಕೊಡುತ್ತಿದ್ದರೆ ಎಂದು ಪ್ರಶ್ನಿಸಿದ ಸಚಿವರು, ವಿಪಕ್ಷಗಳಿಗೆ ಧೈರ್ಯವಿದ್ದರೆ ಸಾರ್ವಜನಿಕ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ShareTweetSendShare
Join us on:

Related Posts

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

by Shwetha
August 20, 2026
0

ಹೊಸದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿನ್ ಝಿ...

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ರೋಗಕ್ಕೆ ತಕ್ಕ ಪೌಷ್ಟಿಕ ಆಹಾರ; 4 ಮಾದರಿಯ ಮೆನು ಸಿದ್ಧತೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ರೋಗಕ್ಕೆ ತಕ್ಕ ಪೌಷ್ಟಿಕ ಆಹಾರ; 4 ಮಾದರಿಯ ಮೆನು ಸಿದ್ಧತೆ

by Shwetha
August 20, 2026
0

ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಇನ್ಮುಂದೆ ವಯಸ್ಸು, ಕಾಯಿಲೆ ಹಾಗೂ ಚಿಕಿತ್ಸೆಯ ಅಗತ್ಯಕ್ಕೆ ಅನುಗುಣವಾಗಿ ಪ್ರತ್ಯೇಕ ಮಾದರಿಯ ಪೌಷ್ಟಿಕ ಆಹಾರ ನೀಡಲು ಆರೋಗ್ಯ ಇಲಾಖೆ ಸಿದ್ಧತೆ...

ನನ್ನೊಳಗಿನ ಅತೀವ ನೋವೇ ನನ್ನನ್ನು ರಾಜಕೀಯಕ್ಕೆ ತಳ್ಳಿತು: ಆತ್ಮಚರಿತ್ರೆಯಲ್ಲಿ ಬದುಕಿನ ಕಹಿ ಸತ್ಯ ಬಿಚ್ಚಿಟ್ಟ ಸೋನಿಯಾ ಗಾಂಧಿ

ನನ್ನೊಳಗಿನ ಅತೀವ ನೋವೇ ನನ್ನನ್ನು ರಾಜಕೀಯಕ್ಕೆ ತಳ್ಳಿತು: ಆತ್ಮಚರಿತ್ರೆಯಲ್ಲಿ ಬದುಕಿನ ಕಹಿ ಸತ್ಯ ಬಿಚ್ಚಿಟ್ಟ ಸೋನಿಯಾ ಗಾಂಧಿ

by Shwetha
August 20, 2026
0

ಹೊಸದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಜೀವನದ ಅತ್ಯಂತ ಖಾಸಗಿ, ಭಾವುಕ ಮತ್ತು ರಾಜಕೀಯ ಪಯಣದ ರಹಸ್ಯಗಳನ್ನು ಜಗತ್ತಿನ ಮುಂದೆ ತೆರೆದಿಡಲು...

ಹೋಟೆಲ್, ರೆಸ್ಟೋರೆಂಟ್, ಮೆಡಿಕಲ್ ಶಾಪ್‌ಗಳಲ್ಲಿ QR ಕೋಡ್; ದೂರು ನೀಡುವುದು ಇನ್ಮುಂದೆ ಸುಲಭ

ಹೋಟೆಲ್, ರೆಸ್ಟೋರೆಂಟ್, ಮೆಡಿಕಲ್ ಶಾಪ್‌ಗಳಲ್ಲಿ QR ಕೋಡ್; ದೂರು ನೀಡುವುದು ಇನ್ಮುಂದೆ ಸುಲಭ

by Shwetha
August 20, 2026
0

ರಾಜಧಾನಿಯ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕೆಫೆಗಳು, ಪಬ್‌ಗಳು ಹಾಗೂ ವಿಶ್ವವಿದ್ಯಾಲಯಗಳ ಕ್ಯಾಂಟೀನ್‌ಗಳಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರು ನೇರವಾಗಿ ದೂರು ಸಲ್ಲಿಸಲು ಹೊಸ ವ್ಯವಸ್ಥೆ ಜಾರಿಗೆ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 20, 2026
0

ದಿನ ಭವಿಷ್ಯ: 20-08-2026. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನ. ನಿಮ್ಮಲ್ಲಿರುವ ನಾಯಕತ್ವದ ಗುಣಗಳು ಮುನ್ನೆಲೆಗೆ ಬರುತ್ತವೆ. ಉದ್ಯೋಗ ಸ್ಥಳದಲ್ಲಿ ಮೇಲಧಿಕಾರಿಗಳಿಂದ ನಿಮ್ಮ ಕೆಲಸಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram